ಚೆನ್ನೈ: ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಇಲ್ಲಿನ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ದಿನದಾಟದಲ್ಲೂ ಇಂಗ್ಲೆಂಡ್ ಪಾರಮ್ಯ ಮುಂದುವರೆದಿದ್ದು, ಮೊದಲ ಇನ್ನಿಂಗ್ಸ್ನಲ್ಲಿ ಆಂಗ್ಲರ ಪಡೆ ಬೃಹತ್ ರನ್ ಕಲೆ ಹಾಕುವತ್ತ ದಾಪುಗಾಲಿಟ್ಟಿದೆ.
ನಿನ್ನೆ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು 263ರನ್ಗಳಿಕೆ ಮಾಡಿದ್ದ ಇಂಗ್ಲೆಂಡ್, ಇಂದು ಕೂಡ ಉತ್ತಮ ಬ್ಯಾಟಿಂಗ್ ಮುಂದುವರೆಸಿದೆ. ಇಂಗ್ಲೆಂಡ್ ತಂಡದ ಕ್ಯಾಪ್ಟನ್ ಜೋ ರೂಟ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದು, ಈಗಾಗಲೇ 156*ರನ್ಗಳಿಕೆ ಮಾಡಿದ್ದಾರೆ. ಅವರಿಗೆ ಉತ್ತಮ ಸಾಥ್ ನೀಡಿರುವ ಆಲ್ರೌಂಡರ್ ಬೆನ್ ಸ್ಟೋಕ್ಸ್ 63 *ರನ್ಗಳಿಕೆ ಮಾಡಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಮೂಲಕ ಆಂಗ್ಲ ಪಡೆ ಮೊದಲ ಇನ್ನಿಂಗ್ಸ್ನಲ್ಲೇ ದೊಡ್ಡ ಮೊತ್ತ ಕಲೆಹಾಕುವ ಮುನ್ಸೂಚನೆ ನೀಡಿದೆ.
ಇಂಗ್ಲೆಂಡ್ ಇಲ್ಲಿಯವರೆಗೆ ಆಡಿರುವ 119 ಓವರ್ಗಳಲ್ಲಿ 3ವಿಕೆಟ್ನಷ್ಟಕ್ಕೆ 355ರನ್ ಕಲೆ ಹಾಕಿದ್ದು, ಮತ್ತಷ್ಟು ರನ್ಗಳಿಕೆ ಮಾಡುವ ಉದ್ದೇಶದಿಂದ ಸ್ಫೋಟಕ ಬ್ಯಾಟಿಂಗ್ ಮೊರೆ ಹೋಗಿದೆ.
ಎರಡನೇ ದಿನದಾಟದ ಆರಂಭದಲ್ಲಿ ಸ್ಟೋಕ್ಸ್ ಹಾಗೂ ರೂಟ್ ಜೋಡಿ ಅಬ್ಬರದ ಬ್ಯಾಟಿಂಗ್ ನಡೆಸುತ್ತಿದ್ದಾರೆ. ವಿಕೆಟ್ ಪಡೆದುಕೊಳ್ಳಲು ಟೀಂ ಇಂಡಿಯಾ ಬೌಲರ್ ಹರಸಾಹಸ ಪಡುತ್ತಿದ್ದು, ಯಾವುದೇ ಬೌಲರ್ ಮಾರಕವಾಗಿ ಪರಿಣಮಿಸಿಲ್ಲ.