ನವದೆಹಲಿ: ಭಾರತ ತಂಡದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮಣಿಕಟ್ಟಿಗೆ ಪೆಟ್ಟು ಬಿದ್ದು ಗಾಯಗೊಂಡಿದ್ದ, ಶಮಿ ನಾಲ್ಕನೇ ಟೆಸ್ಟ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಈಗ ಸ್ವಲ್ಪ ಮಟ್ಟಿನ ಚೇತರಿಕೆ ಕಂಡು ಕೊಂಡಿದ್ದು, ಅಭ್ಯಾಸ ಆರಂಭಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರು ಮತ್ತು ನಾಲ್ಕನೇ ಪಂದ್ಯಗಳಿಗೆ ಶಮಿ ಆಯ್ಕೆಯಾಗುವ ಸಾಧ್ಯತೆ ಇದೆ.
-
Always focus on how far you’ve come ,rather than how far you have left to go 💪🏻💪🏻 #TeamIndia #mshami11 pic.twitter.com/rXGOe9JYo3
— Mohammad Shami (@MdShami11) February 5, 2021 " class="align-text-top noRightClick twitterSection" data="
">Always focus on how far you’ve come ,rather than how far you have left to go 💪🏻💪🏻 #TeamIndia #mshami11 pic.twitter.com/rXGOe9JYo3
— Mohammad Shami (@MdShami11) February 5, 2021Always focus on how far you’ve come ,rather than how far you have left to go 💪🏻💪🏻 #TeamIndia #mshami11 pic.twitter.com/rXGOe9JYo3
— Mohammad Shami (@MdShami11) February 5, 2021
ಡಿಸೆಂಬರ್ 19 ರಂದು ಅಡಿಲೇಡ್‌ನಲ್ಲಿ ನಡೆದ ಭಾರತದ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್ನಲ್ಲಿ ಚೆಂಡು ಶಮಿ ಮಣಿಕಟ್ಟಿಗೆ ಬಡಿದು ಗಾಯಗೊಂಡಿದ್ದರು.
ಬ್ರಿಸ್ಬೇನ್‌ನಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ತೊಡೆಸಂದು ಸ್ನಾಯು ಸೆಳೆತದಿಂದ ಗಾಯಗೊಂಡಿದ್ದ ನವದೀಪ್ ಸೈನಿ ಅವರೊಂದಿಗೆ ಶುಕ್ರವಾರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಮಾಡುವ ವಿಡಿಯೋವನ್ನು ಶಮಿ ಟ್ವೀಟ್ ಮಾಡಿದ್ದಾರೆ.
ಓದಿ : ಡಾನ್ ಬ್ರಾಡ್ಮನ್ ದಾಖಲೆ ಮುರಿದ ಜೋ ರೂಟ್: 2ನೇ ದಿನದಾಂತ್ಯಕ್ಕೆ ಇಂಗ್ಲೆಂಡ್ 555/8
"ಶಮಿ ಈಗ ಗಾಯದ ಸಮಸ್ಯೆಯಿಂದ ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಕೊಂಡಿದ್ದಾರೆ. ದಿನಕ್ಕೆ 50 ರಿಂದ 60 ಪ್ರತಿಶತದಷ್ಟು ಬೌಲಿಂಗ್ ಮಾಡಲು ಅವರಿಗೆ ಸೂಚಿಸಲಾಗಿದೆ. ಫೆಬ್ರವರಿ 24 ರಿಂದ ನಡೆಯುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಅವರು ಮರಳುವ ಸಾಧ್ಯತೆ ಇದೆ" ಎಂದು ಮೂಲಗಳು ತಿಳಿಸಿವೆ.