ದುಬೈ: ಇಂಗ್ಲೆಂಡ್ ವಿರುದ್ಧದ ಕೊನೆಯ ಟಿ-20 ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಟೀಂ ಇಂಡಿಯಾಗೆ ದಂಡ ವಿಧಿಸಲಾಗಿದೆ.
ಪಂದ್ಯದ ಸಂಭಾವನೆಯ ಶೇ 40ರಷ್ಟು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದ್ದು, ನಿಗದಿತ ವೇಳೆಗಿಂತಲೂ ಹೆಚ್ಚಿನ ಅವಧಿ ತೆಗೆದುಕೊಂಡು ಬೌಲಿಂಗ್ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ ಎಂದು ಐಸಿಸಿ ಎಲೈಟ್ ಪ್ಯಾನಲ್ ಆಫ್ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ತಿಳಿಸಿದ್ದಾರೆ. ಆಟಗಾರರು ಮತ್ತು ನೆರವು ಸಿಬ್ಬಂದಿಯ ಕರ್ತವ್ಯಗಳಿಗೆ ಸಂಬಂಧಿಸಿದ ಐಸಿಸಿಯ ನಿಯಮ 2.22ರ ಅಡಿಯಲ್ಲಿ ದಂಡ ವಿಧಿಸಲಾಗಿದೆ.
ಇಂಗ್ಲೆಂಡ್ ವಿರುದ್ಧ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕೊನೆಯ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 36 ರನ್ಗಳ ಗೆಲುವು ಪಡೆಯುವ ಮೂಲಕ, 3-2 ರಿಂದ ಸರಣಿ ವಶಪಡಿಸಿಕೊಂಡಿತ್ತು.
ಓದಿ : 2ನೇ ಟಿ-20ಯಲ್ಲಿ ನಿಧಾನಗತಿ ಬೌಲಿಂಗ್: ಟೀಂ ಇಂಡಿಯಾಗೆ ದಂಡ
ಎರಡನೇ ಟಿ-20 ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಟೀಂ ಇಂಡಿಯಾಗೆ ತಂಡದ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿತ್ತು.