ಅಹಮದಾಬಾದ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20 ಪಂದ್ಯದಲ್ಲಿ ಮತ್ತೆ ತಮ್ಮ ಬ್ಯಾಟಿಂಗ್ ಲಯಕ್ಕೆ ಮರಳಿದ್ದಾರೆ. ಮೊದಲ ಪಂದ್ಯದಲ್ಲಿ ಡಕ್ ಔಟ್ ಆಗಿ ನಿರಾಸೆ ಮೂಡಿಸಿದ್ದ ಕಿಂಗ್ ಕೊಹ್ಲಿ, ಹಲವು ಟೀಕೆಗಳಿಗೆ ಗುರಿಯಾಗಿದ್ದರು.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2ನೇ ಟಿ-20 ಪಂದ್ಯದಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿ ಗೆಲವಿಗೆ ಕಾರಣರಾಗಿದ್ದ ವಿರಾಟ್, ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅಂತರಾಷ್ಟ್ರೀಯ ಟಿ-20 ಕ್ರಿಕೆಟ್‌ನಲ್ಲಿ 3,000 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. 49 ಎಸೆತಗಳನ್ನು ಎದುರಿಸಿದ ವಿರಾಟ್ 5 ಬೌಂಡರಿ ಹಾಗೂ 3 ಸಿಕ್ಸರ್‌ಗಳು ನೆರವಿನಿಂದ 73 ರನ್ಗಳಿಸಿದರು.
-
Who else could it have been?@imVkohli became the first player to score 3000 runs in men's T20Is last night 👏#INDvENG pic.twitter.com/iK87PmnCNF
— ICC (@ICC) March 15, 2021 " class="align-text-top noRightClick twitterSection" data="
">Who else could it have been?@imVkohli became the first player to score 3000 runs in men's T20Is last night 👏#INDvENG pic.twitter.com/iK87PmnCNF
— ICC (@ICC) March 15, 2021Who else could it have been?@imVkohli became the first player to score 3000 runs in men's T20Is last night 👏#INDvENG pic.twitter.com/iK87PmnCNF
— ICC (@ICC) March 15, 2021
ಇದುವರೆಗೆ 87 ಅಂತಾರಾಷ್ಟ್ರೀಯ ಟಿ -20 ಪಂದ್ಯಗಳನ್ನ ಆಡಿರುವ ವಿರಾಟ್ 81 ಇನ್ನಿಂಗ್ಸ್‌ಗಳಲ್ಲಿ ಒಟ್ಟು 3,001 ರನ್ ಕಲೆ ಹಾಕಿದ್ದಾರೆ. ಅಲ್ಲದೇ ಚುಟುಕು ಫಾರ್ಮೆಟ್ನಲ್ಲಿ 50ರ ಸರಾಸರಿ (50.86) ಕಾಪಾಡಿಕೊಂಡಿದ್ದಾರೆ. ಇದರಲ್ಲಿ 26 ಅರ್ಧಶತಕಗಳು ಸೇರಿವೆ.
ಓದಿ : ಚೊಚ್ಚಲ ಪಂದ್ಯದಲ್ಲೇ ಅಬ್ಬರಿಸಿದ ಕಿಶನ್: ಕೊಹ್ಲಿ ಬಗ್ಗೆ ಹೇಳಿದ್ದೇನು?
ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಸರದಾರರು:
ವಿರಾಟ್ ಕೊಹ್ಲಿ(ಭಾರತ): 3001
ಮಾರ್ಟಿನ್ ಗಪ್ಟಿಲ್ (ನ್ಯೂಜಿಲ್ಯಾಂಡ್ ): 2839
ರೋಹಿತ್ ಶರ್ಮಾ (ಭಾರತ): 2,773
ಆ್ಯರೋನ್ ಫಿಂಚ್ (ಆಸ್ಟ್ರೇಲಿಯಾ): 2,346
ಶೋಯೆಬ್ ಮಲಿಕ್ (ಪಾಕಿಸ್ತಾನ): 2,335