ಅಹಮದಾಬಾದ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20 ಪಂದ್ಯದಲ್ಲಿ ಮತ್ತೆ ತಮ್ಮ ಬ್ಯಾಟಿಂಗ್ ಲಯಕ್ಕೆ ಮರಳಿದ್ದಾರೆ. ಮೊದಲ ಪಂದ್ಯದಲ್ಲಿ ಡಕ್ ಔಟ್ ಆಗಿ ನಿರಾಸೆ ಮೂಡಿಸಿದ್ದ ಕಿಂಗ್ ಕೊಹ್ಲಿ, ಹಲವು ಟೀಕೆಗಳಿಗೆ ಗುರಿಯಾಗಿದ್ದರು.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2ನೇ ಟಿ-20 ಪಂದ್ಯದಲ್ಲಿ ಆಕರ್ಷಕ ಅರ್ಧ ಶತಕ ಸಿಡಿಸಿ ಗೆಲುವಿಗೆ ಕಾರಣರಾಗಿದ್ದ ವಿರಾಟ್, ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ನಲ್ಲಿ ಒಂದೇ ದಿನ ಎರಡು ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ನಲ್ಲಿ 3,000 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರೆ, ಇತ್ತ ನಾಯಕನಾಗಿ ವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12,000 ರನ್ ಗಳಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಓದಿ : ಕಿಂಗ್ ಕೊಹ್ಲಿ ಮುಡಿಗೆ ಮತ್ತೊಂದು ದಾಖಲೆ : ಟಿ-20 ಕ್ರಿಕೆಟ್‌ನಲ್ಲಿ ಇವರೇ "ವಿರಾಟ್"
ಇದುವರೆಗೆ 87 ಅಂತಾರಾಷ್ಟ್ರೀಯ ಟಿ -20 ಪಂದ್ಯಗಳನ್ನು ಆಡಿರುವ ವಿರಾಟ್ 81 ಇನ್ನಿಂಗ್ಸ್‌ಗಳಲ್ಲಿ ಒಟ್ಟು 3,001 ರನ್ ಕಲೆ ಹಾಕಿದ್ದಾರೆ. ಅಲ್ಲದೆ ಚುಟುಕು ಫಾರ್ಮ್ಯಾಟ್ನಲ್ಲಿ 50ರ ಸರಾಸರಿ (50.86) ಕಾಪಾಡಿಕೊಂಡಿದ್ದಾರೆ. ಇದರಲ್ಲಿ 26 ಅರ್ಧಶತಕಗಳು ಸೇರಿವೆ.
ಇನ್ನು ವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12,000 ರನ್ ಗಳಿಸಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ 226 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಮೊದಲು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 282 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರೆ, ಗ್ರೇಮ್ ಸ್ಮಿತ್ 294 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.