ಹೈದರಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ-20 ಸರಣಿಯ ಮೂರನೇ ಪಂದ್ಯ ಇಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಎರಡು ಪಂದ್ಯಗಳಲ್ಲಿ, ಎರಡೂ ತಂಡಗಳು 1-1 ಅಂತರದ ಗೆಲುವಿನೊಂದಿಗೆ ಸರಣಿ ಸಮಬಲ ಸಾಧಿಸಿವೆ. ಮೂರನೇ ಪಂದ್ಯದಲ್ಲಿ, ಉಭಯ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದಿಂದ ಮೈದಾನಕ್ಕಿಳಲಿವೆ.
ಮೂರನೇ ಟಿ- 20 ಪಂದ್ಯದಲ್ಲಿ ಟೀಂ ಇಂಡಿಯಾದ ಹಿಟ್ಮ್ಯಾನ್ ರೋಹಿತ್ ಶರ್ಮಾ ಕಮ್ಬ್ಯಾಕ್ ಮಾಡುವ ಸಾಧ್ಯತೆ ಇದೆ. ರೋಹಿತ್‌ಗೆ ಮೊದಲೆರಡು ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿತ್ತು. ರೋಹಿತ್ ಶರ್ಮಾ ತಂಡಕ್ಕೆ ಮರಳಿದರೆ ಟೀಮ್ ಇಂಡಿಯಾ ಪರ ಯಾರು ಇನ್ನಿಂಗ್ಸ್ ಆರಂಭಿಸಬೇಕು ಎನ್ನುವುದು ದೊಡ್ಡ ತಲನೋವಾಗಿ ಪರಿಣಮಿಸಿದೆ.
ಮೊದಲ ಪಂದ್ಯದಲ್ಲಿ ಶಿಖರ್ ಧವನ್, ಕೆ.ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಿದ್ದರು. ಆದರೆ, ಈ ಜೋಡಿ ಹೇಳಿಕೊಳ್ಳುವಂತಹ ಆರಂಭ ನೀಡಿರಲಿಲ್ಲ. ಇನ್ನೂ ಎರಡನೇ ಪಂದ್ಯದಲ್ಲಿ ಧವನ್ಗೆ ಕೋಕ್ ನೀಡಿ, ಇಶಾನ್ ಕಿಶನ್ಗೆ ಅವಕಾಶ ನೀಡಲಾಗಿತ್ತು. ಸಿಕ್ಕ ಅವಕಾಶವನ್ನ ಸರಿಯಾಗಿ ಬಳಿಸಿಕೊಂಡ ಕಿಶನ್ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇನ್ನೂ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ರಾಹುಲ್ಗೆ ಇಂದಿನ ಪಂದ್ಯದಲ್ಲಿ ಮತ್ತೆ ಚಾನ್ಸ್ ಸಿಗುತ್ತಾ ಎನ್ನುವುದೇ ಪ್ರಶ್ನೆಯಾಗಿದೆ.
ಓದಿ : ಭಾರತ-ಇಂಗ್ಲೆಂಡ್ ಮುಂದಿನ ಟಿ-20 ಪಂದ್ಯ ವೀಕ್ಷಣೆಗೆ ಪ್ರೇಕ್ಷಕರಿಗಿಲ್ಲ ಅವಕಾಶ