ನವದೆಹಲಿ: ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡುವ ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜೋಸ್ ಬಟ್ಲರ್, ತಾವೂ ಯುಎಇನಲ್ಲಿ ನಡೆಯಲಿರುವ ಐಪಿಎಲ್ನ 2ನೇ ಭಾಗಕ್ಕೆ ಲಭ್ಯವಾಗುವ ಸಾಧ್ಯತೆಯಿಲ್ಲ ಎಂದು ತಿಳಿಸಿದ್ದರು.
ಐಪಿಎಲ್ ಸಾಮಾನ್ಯವಾಗಿ ಯಾವುದೇ ಅಂತಾರಾಷ್ಟ್ರೀಯ ಕ್ರಿಕೆಟ್ ಜೊತೆಗೆ ಕಲಹ ಹೊಂದಿರುತ್ತಿರಲಿಲ್ಲ. ಒಂದು ವೇಳೆ ವೇಳಾಪಟ್ಟಿಯ ಘರ್ಷಣೆ ಉಂಟಾದರೆ ನಮ್ಮ ಆದ್ಯತೆ ಸಹಜವಾಗಿ ಇಂಗ್ಲೆಂಡ್ ಪರ ಇರುತ್ತದೆ ಎಂದು ಬಟ್ಲರ್ ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಮೇ ತಿಂಗಳಲ್ಲೇ ಇಸಿಬಿ ಮ್ಯಾನೇಜಿಂಗ್ ಡೈರೆಕ್ಟರ್ ಆ್ಯಶ್ಲೇ ಗಿಲ್ಸ್ ಐಪಿಎಲ್ ಗೋಸ್ಕರ್ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ವೇಳಾಪಟ್ಟಿ ಬದಲಿಸಲು ಸಾಧ್ಯವಿಲ್ಲ. ನಮ್ಮ ಆಟಗಾರರು ರಾಷ್ಟ್ರೀಯ ತಂಡದ ಪರ ಆಡಲಿದ್ದಾರೆ. ಉಳಿದವರು ಟಿ-20 ವಿಶ್ವಕಪ್ ದೃಷ್ಟಿಯಿಂದ ವಿಶ್ರಾಂತಿಯಲ್ಲಿರಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಇಂಗ್ಲೆಂಡ್ ತಂಡ ಭಾರತದ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೂ ಮೊದಲೂ ಶ್ರೀಲಂಕಾ ಮತ್ತು ಪಾಕಿಸ್ತಾನ ವಿರುದ್ಧ ಸೀಮಿತ ಓವರ್ಗಳ ಸರಣಿಯನ್ನಾಡಲಿದೆ. ನಂತರ ಆಗಸ್ಟ್ 4ರಿಂದ ಸೆಪ್ಟೆಂಬರ್ 14 ರವರೆಗೆ ಟೆಸ್ಟ್ ಸರಣಿಯನ್ನಾಡಲಿದೆ. ನಂತರ ವಿಶ್ವಕಪ್ಗೂ ಮುನ್ನ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ. ಹಾಗಾಗಿ ತನ್ನ ವೈಟ್ ಬಾಲ್ ಆಟಗಾರರನ್ನು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡಲು ಅವಕಾಶ ಕೊಡುವ ಸಾಧ್ಯತೆಗಳಿಲ್ಲ ಎನ್ನಲಾಗುತ್ತಿದೆ.
ಇಂಗ್ಲೆಂಡ್ ಆಟಗಾರರು
ಮೊಯೀನ್ ಅಲಿ, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಇಯಾನ್ ಮಾರ್ಗನ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಕ್ರಿಸ್ ವೋಕ್ಸ್, ಜೇಸನ್ ರಾಯ್, ಸ್ಯಾಮ್ ಬಿಲ್ಲಿಂಗ್ಸ್, ಡೇವಿಡ್ ಮಲನ್, ಕ್ರಿಸ್ ಜೋರ್ಡಾನ್, ಜಾನಿ ಬೈರ್‌ಸ್ಟೋವ್
ಇದನ್ನು ಓದಿ: ಜಾಕ್ ಕಾಲೀಸ್ಗೆ 21 ನೇ ಶತಮಾನದ ಶ್ರೇಷ್ಠ All rounder ಗೌರವ