ETV Bharat / sports

ವೆಸ್ಟ್ ಇಂಡೀಸ್ ವಿರುದ್ಧದ ಟಿ-20ಐ ಸರಣಿಗೆ ಹಾರ್ದಿಕ್ ಪಾಂಡ್ಯ ನಾಯಕ

ರೋಹಿತ್, ವಿರಾಟ್ ವಿಶ್ರಾಂತಿ ಪಡೆದಿದ್ದರಿಂದ ವೆಸ್ಟ್ ಇಂಡೀಸ್ ವಿರುದ್ಧದ ಟಿ-20ಐ ಸರಣಿಗಾಗಿ ಹಾರ್ದಿಕ್ ಪಾಂಡ್ಯ ಭಾರತವನ್ನು ಮುನ್ನಡೆಸಲಿದ್ದಾರೆ. ಸೂರ್ಯ ಯಾದವ್ ಅವರನ್ನು ಉಪ ನಾಯಕ ಸ್ಥಾನ ವಹಿಸಿಕೊಳ್ಳಲಿದ್ದಾರೆ.

Hardik Pandya
ವೆಸ್ಟ್ ಇಂಡೀಸ್ ವಿರುದ್ಧದ ಟಿ-20ಐ ಸರಣಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಲಿರುವ ಹಾರ್ದಿಕ್ ಪಾಂಡ್ಯ..
author img

By

Published : Jul 5, 2023, 11:04 PM IST

ಮುಂಬೈ (ಮಹಾರಾಷ್ಟ್ರ): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಮ್ಮ ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಭಾರತದ ಟಿ-20ಐ ತಂಡವನ್ನು ಬುಧವಾರ ಪ್ರಕಟಿಸಿದೆ.

ಹಾರ್ದಿಕ್ ಪಾಂಡ್ಯಗೆ ನಾಯಕತ್ವ: "ಹಿರಿಯರ ಪುರುಷರ ತಂಡದ ಆಯ್ಕೆ ಸಮಿತಿಯು ಕೆರಿಬಿಯನ್ ದ್ವೀಪಗಳು ಮತ್ತು ಯುಎಸ್ಎಯ ಫ್ಲೋರಿಡಾದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ-20ಐ ಸರಣಿಗೆ ಭಾರತ ತಂಡವನ್ನು ಬುಧವಾರ ಆಯ್ಕೆ ಮಾಡಿದೆ" ಎಂದು ತಂಡವನ್ನು ಪ್ರಕಟಿಸಿದ ಬಿಸಿಸಿಐ ಅಧಿಕೃತ ಹೇಳಿಕೆ ಕೂಡಾ ನೀಡಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಸೂರ್ಯಕುಮಾರ್ ಯಾದವ್ ಅವರು ಉಪನಾಯಕರಾಗಿದ್ದಾರೆ.

ಟಿ-20ಐ ತಂಡದಿಂದ ವಿರಾಟ್ ಕೊಹ್ಲಿ ಕೂಡಾ ಈ ಸರಣಿಗೆ ಗೈರುಹಾಜರಾಗಲಿದ್ದಾರೆ. ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಲೈನ್-ಅಪ್‌ನಲ್ಲಿ 3ನೇ ಸ್ಥಾನಕ್ಕೆ ಬರುವ ಸಾಧ್ಯತೆಯಿದೆ. ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಟೆಸ್ಟ್ ಮತ್ತು ಒಡಿಐ ತಂಡಗಳಲ್ಲಿ ಸ್ಥಾನ ಪಡೆದಿರಲಿಲ್ಲ. ಟಿ-20 ಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಎರಡೂ ತಂಡಗಳು ಟಿ-20ಐ ಸರಣಿಗಾಗಿ ಐದು ಪಂದ್ಯಗಳನ್ನು ಆಡಲಿವೆ. ಅದರಲ್ಲಿ ಮೊದಲನೆಯದು ಆಗಸ್ಟ್ 3 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದೆ.

ಎರಡನೇ ಟಿ-20ಐ ಗಯಾನಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಗಸ್ಟ್ 6 ರಂದು ನಡೆಯಲಿದ್ದು, ಮೂರನೇ ಪಂದ್ಯವನ್ನು ಆಗಸ್ಟ್ 8 ರಂದು ಅದೇ ಸ್ಥಳದಲ್ಲಿ ಆಯೋಜಿಸಲಾಗುವುದು. ನಾಲ್ಕನೇ ಮತ್ತು ಐದನೇ ಟಿ-20ಐ ಪಂದ್ಯ ಫ್ಲೋರಿಡಾದ ಬ್ರೋವರ್ಡ್ ಕೌಂಟಿ ಕ್ರೀಡಾಂಗಣದಲ್ಲಿ ಆಗಸ್ಟ್ 12 ಹಾಗೂ 13 ರಂದು ನಡೆಯಲಿದೆ.

ಭಾರತದ ಟಿ-20ಐ ತಂಡದಲ್ಲಿರುವ ಆಟಗಾರರು: ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ವಿಸಿ), ಸಂಜು ಸ್ಯಾಮ್ಸನ್ (ವಿಕೆ), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಭಾರತದ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತದ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಇದನ್ನೂ ಓದಿ: ICC Raking: ಅಗ್ರ ಸ್ಥಾನದಲ್ಲೇ ಮುಂದುವರಿದ ಅಶ್ವಿನ್​, ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಉತ್ತುಂಗಕ್ಕೇರಿದ ಗಾಯಾಳು ವಿಲಿಯಮ್ಸನ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.