ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ 14ನೇ ಆವೃತ್ತಿಯಿಂದ ಹೊರಗುಳಿದಿದ್ದ ಭಾರತ ತಂಡ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ವೇಗಿ ಟಿ.ನಟರಾಜನ್ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರು. ಈಗ ಅವರು ಚೇತರಿಕೆ ಕಾಣುತ್ತಿದ್ದಾರೆ.
ಈ ಬಗ್ಗೆ ನಟರಾಜನ್ ಇನ್‌ಸ್ಟಾಗ್ರಾಂನಲ್ಲಿ ತಾವು ವರ್ಕೌಟ್ ಮಾಡುವ ವಿಡಿಯೋ ಹಂಚಿಕೊಂಡು, "ನಾನು ಮೊದಲಿಗಿಂತ ಪ್ರತಿದಿನ ಸ್ಟ್ರಾಂಗ್ ಆಗುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ.
ಕಳೆದ ವರ್ಷ ತನ್ನ ಯಾರ್ಕರ್ಗಳ ಮೂಲಕ ವಿಶ್ವ ಕ್ರಿಕೆಟ್ನ ಗಮನ ಸೆಳೆದಿದ್ದ 30 ವರ್ಷದ ವೇಗಿ ಯುಎಇನಲ್ಲಿ ನಡೆದಿದ್ದ ಟೂರ್ನಿಯಲ್ಲಿ 16 ವಿಕೆಟ್ ಪಡೆದಿದ್ದರು. ಈ ಅದ್ಭುತ ಪ್ರದರ್ಶನದ ನಂತರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೂರು ಸ್ವರೂಪದ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಈ ಬಾರಿಯ ಐಪಿಎಲ್ನಲ್ಲಿ ಕೇವಲ ಎರಡು ಪಂದ್ಯಗಳನ್ನಾಡಿದ್ದು, 2 ವಿಕೆಟ್ ಪಡೆದಿದ್ದರು.