ಧರ್ಮಶಾಲಾ (ಹಿಮಾಚಲ ಪ್ರದೇಶ): ಏಕದಿನ ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದ ಆಟಗಾರರಲ್ಲಿ ಎರಡು ಬದಲಾವಣೆಗಳು ಆಗಿದ್ದು, ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್ ಕಣಕ್ಕೆ ಇಳಿಯಲಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ಉಭಯ ತಂಡಗಳು ವಿಶ್ವಕಪ್ ಟೂರ್ನಿಯಲ್ಲಿ ಇದುವರೆಗೆ ಆಡಿದ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದಿವೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಎರಡು ತಂಡಗಳಾಗಿ ಮುಂದುವರೆದಿವೆ. ಸೆಮಿಫೈನಲ್ ತಲುಪಲು ಎರಡೂ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಪಂದ್ಯದಲ್ಲಿ ಯಾರು ಗೆದ್ದರೂ ಸೆಮೀಸ್ ಪ್ರವೇಶ ಬಹುತೇಕ ಖಚಿತವಾಗಲಿದೆ.
-
🚨 Toss and Team Update 🚨
— BCCI (@BCCI) October 22, 2023 " class="align-text-top noRightClick twitterSection" data="
Rohit Sharma wins the toss and #TeamIndia have elected to bowl first in Dharamsala!
Two changes in the side as Suryakumar Yadav & Mohd. Shami are named in the eleven 👌
Follow the match ▶️ https://t.co/Ua4oDBM9rn#CWC23 | #MenInBlue | #INDvNZ pic.twitter.com/6dy150WC1S
">🚨 Toss and Team Update 🚨
— BCCI (@BCCI) October 22, 2023
Rohit Sharma wins the toss and #TeamIndia have elected to bowl first in Dharamsala!
Two changes in the side as Suryakumar Yadav & Mohd. Shami are named in the eleven 👌
Follow the match ▶️ https://t.co/Ua4oDBM9rn#CWC23 | #MenInBlue | #INDvNZ pic.twitter.com/6dy150WC1S🚨 Toss and Team Update 🚨
— BCCI (@BCCI) October 22, 2023
Rohit Sharma wins the toss and #TeamIndia have elected to bowl first in Dharamsala!
Two changes in the side as Suryakumar Yadav & Mohd. Shami are named in the eleven 👌
Follow the match ▶️ https://t.co/Ua4oDBM9rn#CWC23 | #MenInBlue | #INDvNZ pic.twitter.com/6dy150WC1S
ಭಾರತಕ್ಕೆ ಗೆಲುವು ತವಕ: ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡದ ಮೇಲೆ ನ್ಯೂಜಿಲೆಂಡ್ ಮೈಲುಗೈ ಹೊಂದಿದೆ. ಇಲ್ಲಿಯವರೆಗೆ ಎರಡೂ ತಂಡಗಳು 9 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ನ್ಯೂಜಿಲೆಂಡ್ 5 ಬಾರಿ ಗೆದ್ದಿದ್ದರೆ, ಭಾರತ 3 ಬಾರಿ ಪಂದ್ಯವನ್ನು ಗೆದ್ದಿದೆ. ಉಳಿದಂತೆ 1 ಪಂದ್ಯ ಮಳೆಯಿಂದಾಗಿ ರದ್ದಾಗಿದೆ.
2019ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಎರಡೂ ತಂಡಗಳು ಕೊನೆಯದಾಗಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು 18 ರನ್‌ಗಳಿಂದ ಸೋಲಿಸಿತ್ತು. ಈ ಮೂಲಕ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಹಂತಕ್ಕೆ ಪ್ರವೇಶಿಸುವ ಟೀಂ ಇಂಡಿಯಾದ ಕನಸನ್ನು ನ್ಯೂಜಿಲೆಂಡ್ ಭಗ್ನ ಮಾಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ ಇದೆ.
ವಿರಾಟ್ ಮೇಲೆ ಕಣ್ಣು: ಧರ್ಮಶಾಲಾ ಮೈದಾನದಲ್ಲಿ ವಿರಾಟ್ ಕೊಹ್ಲಿ ಆಡಿದ 4 ಇನ್ನಿಂಗ್ಸ್‌ಗಳಲ್ಲಿ 85.00 ಸರಾಸರಿ ಮತ್ತು 133.70ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನೊಂದಿಗೆ ಒಟ್ಟು 255 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕ ಕೂಡ ಒಳಗೊಂಡಿದ್ದು, ವಿರಾಟ್ ಗಳಿಸಿದ ಗರಿಷ್ಠ ಸ್ಕೋರ್ 127 ರನ್ ಆಗಿದೆ. ಈ ಮೈದಾನದಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಏಕೈಕ ಆಟಗಾರ ಎಂಬ ಖ್ಯಾತಿಯನ್ನೂ ಅವರು ಹೊಂದಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಬ್ಯಾಟಿಂಗ್ ಹೆಚ್ಚಿನ ಕುತೂಹಲ ಮೂಡಿಸಿದೆ.
ತಂಡಗಳು ಇಂತಿವೆ:
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ವಿಕೆಟ್ ಕೀಪರ್ ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಇದನ್ನೂ ಓದಿ: ಭಾರತ ಸೆಮಿಫೈನಲ್ ಪ್ರವೇಶಿಸಲು ನ್ಯೂಜಿಲೆಂಡ್ ವಿರುದ್ಧದ ಪಂದ್ಯ ನಿರ್ಣಾಯಕ; ಮಾಜಿ ಬಿಸಿಸಿಐ ಆಯ್ಕೆಗಾರ ಸುರೇಂದ್ರ ಭಾವೆ