ಮೆಲ್ಬರ್ನ್(ಆಸ್ಟ್ರೇಲಿಯಾ): ಚುಟುಕು ಕ್ರಿಕೆಟ್ ವಿಶ್ವಸಮರ ಟಿ-20 ಕ್ರಿಕೆಟ್ ವಿಶ್ವಕಪ್ಗೆ ದಿನಾಂಕ ನಿಗದಿಯಾಗಿದ್ದು, ಮೊದಲ ರೌಂಡ್ನ ಪಂದ್ಯಗಳು ಅಕ್ಟೋಬರ್ 16ರಿಂದ ಆರಂಭವಾಗಲಿವೆ. ಮೊದಲ ರೌಂಡ್ನ ಮೊದಲ ಪಂದ್ಯ ಶ್ರೀಲಂಕಾ ಮತ್ತು ನಮೀಬಿಯಾ ನಡುವೆ ನಡೆಯಲಿದೆ.
ಅಕ್ಟೋಬರ್ 21ರವರೆಗೆ ನಡೆಯುವ ಈ ಪಂದ್ಯಗಳಲ್ಲಿ ಅರ್ಹತೆ ಪಡೆದ ತಂಡಗಳು ಸೂಪರ್-12 ತಂಡಗಳೊಡನೆ ಆಡಲು ಅರ್ಹತೆ ಪಡೆದುಕೊಳ್ಳುತ್ತವೆ. ಮೊದಲ ರೌಂಡ್ನಲ್ಲಿ ಶ್ರೀಲಂಕಾ, ನಮೀಬಿಯಾ, ಸ್ಕಾಟ್ಲೆಂಡ್, ವೆಸ್ಟ್ ಇಂಡೀಸ್ ತಂಡಗಳು ಆಡಲಿವೆ.
![ICC Men's T20 WC 2022: Match time table announced](https://etvbharatimages.akamaized.net/etvbharat/prod-images/14241034_raaa.png)
ಸೂಪರ್ 12 ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ನ್ಯೂಜಿಲ್ಯಾಂಡ್ ಮತ್ತು ಆಸ್ಟ್ರೇಲಿಯಾಗಳ ನಡುವೆ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿದೆ. ಭಾರತವು ಅಕ್ಟೋಬರ್ 23ರಂದು ಪಾಕಿಸ್ತಾನದೊಂದಿಗೆ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ಮೊದಲ ಪಂದ್ಯವನ್ನು ಆಡಲಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮೊದಲ ಸೆಮಿಫೈನಲ್ ನವೆಂಬರ್ 9ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಮತ್ತು ಎರಡನೇ ಸೆಮಿಫೈನಲ್ ನವೆಂಬರ್ 10ರಂದು ಅಡಿಲೇಡ್ ಓವಲ್ ಗ್ರೌಂಡ್ನಲ್ಲಿ ನಡೆಯಲಿದೆ. ಇದಾದ ನಂತರ ನವೆಂಬರ್ 13ರಂದು ಫೈನಲ್ ಪಂದ್ಯ ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ.
ಇದನ್ನೂ ಓದಿ: ವಿವಾದಾತ್ಮಕ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ಗೆ ಒಂದು ಅಂಕದಿಂದ ರೋಚಕ ಸೋಲು