ದುಬೈ: ಸೆಮಿಫೈನಲ್ ಗೆಲುವು ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಬಾಂಗ್ಲಾದೇಶದ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆಡಿರುವ 3 ಪಂದ್ಯಗಳಲ್ಲಿ 2 ಜಯ ಮತ್ತು ಒಂದು ಸೋಲು ಕಂಡಿರುವ ಆಸ್ಟ್ರೇಲಿಯಾ ಸೆಮಿಫೈನಲ್ ಪ್ರವೇಶಿಸಲು ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ. ಇಂದಿನ ಪಂದ್ಯದಲ್ಲಿ ಆಸೀಸ್ ಒಂದುಬದಲಾವಣೆ ಮಾಡಿಕೊಂಡಿದ್ದು,ಆಷ್ಟನ್ ಅಗರ್ ಬದಲಿಗೆ ಮಿಚೆಲ್ ಮಾರ್ಷ್ 11ರ ಬಳಗಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ಸತತ 4 ಪಂದ್ಯಗಳಲ್ಲಿ ಸೋಲು ಕಂಡಿರುವ ಬಾಂಗ್ಲಾದೇಶ ಸೂಪರ್ 12ನಲ್ಲಿ ತನ್ನ ಕೊನೆಯ ಪಂದ್ಯವಾಗಿದ್ದು, ಇದರಲ್ಲಾದರೂ ಗೆದ್ದು ಟೂರ್ನಿಗೆ ಗುಡ್ಬೈ ಹೇಳುವ ಆಲೋಚನೆಯಲ್ಲಿದೆ. ಇಂದಿನ ಪಂದ್ಯದಲ್ಲಿ ನಾಸುಮ್ ಬದಲಿಗೆ ಮುಸ್ತಫಿಜುರ್ ರೆಹಮಾನ್ ಕಣಕ್ಕಿಳಿಯಲಿದ್ದಾರೆ.
ಬಾಂಗ್ಲಾದೇಶ (ಪ್ಲೇಯಿಂಗ್ XI): ಮೊಹಮ್ಮದ್ ನಯೀಮ್, ಲಿಟನ್ ದಾಸ್ (ವಿಕೀ), ಸೌಮ್ಯ ಸರ್ಕಾರ್, ಮುಶ್ಫೀಕರ್ ರಹೀಮ್, ಮಹಮ್ಮದುಲ್ಲಾ (ನಾಯಕ), ಅಫೀಫ್ ಹೊಸೈನ್, ಶಮೀಮ್ ಹೊಸೈನ್, ಮಹೆದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೇನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿನಿಸ್, ಮ್ಯಾಥ್ಯೂ ವೇಡ್ (ವಿಕೀ), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಇದನ್ನು ಓದಿ:ಐಸಿಸಿ ಟಿ20 ವಿಶ್ವಕಪ್ನಲ್ಲಿ ಭಾರತಕ್ಕೆ ಮೊದಲ ಗೆಲುವು... ಸೆಮಿ ಫೈನಲ್ ಆಸೆ ಜೀವಂತ!