ದುಬೈ: ಟಿ-20 ವಿಶ್ವಕಪ್ 2021ರ ಸೂಪರ್ 12 ಸುತ್ತಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 151 ರನ್ ಗಳಿಸಿದೆ. ಈ ಮೂಲಕ ಪಾಕಿಸ್ತಾನಕ್ಕೆ 152 ರನ್ಗಳ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಯಾ ಆರಂಭಿಕ ಆಘಾತ ಅನುಭವಿಸಿತು. ಓಪನರ್ ಆಗಿ ಕಣಕ್ಕಿಳಿದ ಕೆ. ಎಲ್. ರಾಹುಲ್ ಮತ್ತು ರೋಹಿತ್ ಶರ್ಮಾ ತಂಡಕ್ಕೆ ಭದ್ರ ಬುನಾದಿ ಹಾಕಿ ಕೊಡುವಲ್ಲಿ ಎಡವಿದರು. ಶಾಹೀನ್ ಅಫ್ರಿದಿ ಎಸೆದ ಮೊದಲ ಓವರ್ನಲ್ಲಿ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರು. ಇದರ ಬೆನ್ನಲ್ಲೆ ರಾಹುಲ್ 3ನೇ ಓವರ್ನಲ್ಲಿ ಕೇವಲ 3 ರನ್ಗಳಿಸಿ ಶಾಹೀನ್ ಅಫ್ರಿದಿ ಬೌಲಿಂಗ್ನಲ್ಲಿ ಕ್ಲೀನ್ ಬೌಲ್ಡ್ ಆದರು.
ನಂತರ ಒಂದಾದ ನಾಯಕ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಜೋಡಿ 25 ರನ್ಗಳ ಜೊತೆಯಾಟವಾಡಿತು. ಸೂರ್ಯ ಕುಮಾರ್ ಯಾದವ್ 11 ರನ್ಗಳಿಸಿ ಹಸನ್ ಅಲಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ರಿಷಬ್ ಪಂತ್ ತಾಳ್ಮೆಯ ಆಟಕ್ಕೆ ಮುಂದಾದರು. ಕೊಹ್ಲಿ ಮತ್ತು ಪಂತ್ ಜೋಡಿ ಅರ್ಧಶತಕದ ಜೊತೆಯಾಟವಾಡುವ ಮೂಲಕ ಭಾರತ ತಂಡಕ್ಕೆ ಆಸರೆಯಾಯಿತು. ಪಂತ್ 39 ರನ್ಗಳಿಸಿದ್ದಾಗ ದೊಡ್ಡ ಹೊಡತಕ್ಕೆ ಮುಂದಾಗಿ ಶದಬ್ ಖಾನ್ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ರವೀಂದ್ರ ಜಡೆಜಾ 13 ರನ್ಗಳಿಸಿ ಹಸನ್ ಅಲಿಗೆ ವಿಕೆಟ್ ಒಪ್ಪಿಸಿದರು.
ಇನ್ನೂ ಕೇವಲ ಎರಡು ಓವರ್ ಉಳಿದಾಗ ಕ್ರೀಸ್ಗೆ ಬಂದ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಮಾಡಿ ರನ್ಗಳಿಸಿದರು. ಮತ್ತೊಮ್ಮ ಟೀಮ್ ಇಂಡಿಯಾಗೆ ಆಸರೆಯಾದ ನಾಯಕ ವಿರಾಟ್ ಕೊಹ್ಲಿ ಅಂತಿಮವಾಗಿ 57 ರನ್ಗಳಿಸುವ ಮೂಲಕ ತಂಡವನ್ನು 150ರ ಗಡಿಯತ್ತ ಕೊಂಡ್ಯೊಯ್ದರು. ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು.
ಇನ್ನ ಪಾಕ್ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಶಾಹೀನ್ ಅಫ್ರಿದಿ 3, ಹಸನ್ ಅಲಿ 2 ಮತ್ತು ಶದಬ್ ಖಾನ್ 1 ವಿಕೆಟ್ ಪಡೆದು ಮಿಂಚಿದರು.