ETV Bharat / sports

ಟಿ20 ರ‍್ಯಾಂಕಿಂಗ್​ನಲ್ಲಿ ಸೂರ್ಯಕುಮಾರ್ ಟಾಪ್.. ಏಕದಿನ ರ‍್ಯಾಂಕಿಂಗ್‌ನಲ್ಲಿ ಕೊಹ್ಲಿಗೆ ಆರನೇ ಸ್ಥಾನ - ಹೊಸ ರ‍್ಯಾಂಕಿಂಗ್‌

ಟಿ20 ಮತ್ತು ಏಕದಿನ ಪಂದ್ಯಗಳಿಗೆ ಸಂಬಂಧಿಸಿದ ಹೊಸ ರ‍್ಯಾಂಕಿಂಗ್‌ಗಳನ್ನು ಐಸಿಸಿ ಬಿಡುಗಡೆ ಮಾಡಿದೆ. ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.

icc-rankings-suryakumar-continues-to-stay-at-top-in-20i-kohli-sixth-in-odi-ranking
ಟಿ20 ರ‍್ಯಾಂಕಿಂಗ್​ನಲ್ಲಿ ಸೂರ್ಯಕುಮಾರ್ ಟಾಪ್... ಏಕದಿನ ರ‍್ಯಾಂಕಿಂಗ್‌ನಲ್ಲಿ ಕೊಹ್ಲಿ ಆರನೇ ಸ್ಥಾನ
author img

By

Published : Nov 23, 2022, 5:09 PM IST

ದುಬೈ: ಐಸಿಸಿ ಪುರುಷರ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ರ‍್ಯಾಂಕಿಂಗ್‌ನಲ್ಲಿ 50ನೇ ಸ್ಥಾನಕ್ಕೆ ತಲುಪಿದ್ದಾರೆ.

ನ್ಯೂಜಿಲ್ಯಾಂಡ್​​ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಅಜೇಯ 111 ರನ್ ಸಿಡಿಸಿದ್ದರು. ಈ ಮೂಲಕ ಟಿ20 ರ‍್ಯಾಂಕಿಂಗ್‌ನಲ್ಲಿ ತಮ್ಮ ಅಗ್ರ ಸ್ಥಾನವನ್ನು ಬಲಪಡಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಸೂರ್ಯಕುಮಾರ್ 31 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿದ್ದು, ಒಟ್ಟಾರೆ 890 ಪಾಯಿಂಟ್​ಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಹೋಮ್​ ಸ್ಟೇ ವ್ಯವಹಾರ: ಕ್ರಿಕೆಟಿಗ ಯುವರಾಜ್ ಸಿಂಗ್​ಗೆ ಗೋವಾ ಪ್ರವಾಸೋದ್ಯಮ ಇಲಾಖೆ ನೋಟಿಸ್

ಸೂರ್ಯಕುಮಾರ್​ ಅವರಿಗಿಂತ 54 ಪಾಯಿಂಟ್​ಗಳನ್ನು ಕಡಿಮೆ ಹೊಂದಿರುವ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್‌ ಎರಡನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ, ನ್ಯೂಜಿಲ್ಯಾಂಡ್​ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ತಮ್ಮ ಟಿ20 ರ‍್ಯಾಂಕಿಂಗ್‌ನಲ್ಲಿ ತಮ್ಮ ಸ್ಥಾನವನ್ನು ಉತ್ತಮ ಪಡಿಸಿಕೊಂಡಿದ್ದಾರೆ. ಕೊನೆ ಪಂದ್ಯದಲ್ಲಿ ಅಜೇಯ 30 ರನ್ ಗಳಿಸುವ ಮೂಲಕ ಬ್ಯಾಟರ್‌ಗಳ ಜಂಟಿ 50ನೇ ಸ್ಥಾನವನ್ನು ತಲುಪಿದ್ದಾರೆ.

ಬೌಲರ್‌ಗಳ ಪಟ್ಟಿಯಲ್ಲಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲೇರಿ 11ನೇ ಸ್ಥಾನಕ್ಕೆ ತಲುಪಿದ್ದಾರೆ. ಎಡಗೈ ಸೀಮರ್ ಅರ್ಷದೀಪ್ ಸಿಂಗ್ 21ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಎಂಟು ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ.

ಏಕದಿನ ರ‍್ಯಾಂಕಿಂಗ್‌ನಲ್ಲಿ ಕೊಹ್ಲಿ ಆರನೇ ಸ್ಥಾನ: ಟೀಂ ಇಂಟಿಯಾದ ಭರವಸೆಯ ಆಟಗಾರರ ವಿರಾಟ್ ಕೊಹ್ಲಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಆರನೇ ಸ್ಥಾನಕ್ಕೆ ಏರಿದ್ದು, ಮತ್ತೊಬ್ಬ ಬ್ಯಾಟರ್​ ರೋಹಿತ್ ಶರ್ಮಾ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ 11ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ವಿರಾಟ್​ ಕೊಹ್ಲಿಯೂ ಸಾಧಿಸದ ದಾಖಲೆ ಬರೆದ ಸೂರ್ಯಕುಮಾರ್​​​.. ಏನದು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.