ದುಬೈ(ಯುಎಇ) : ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದೆ. ಆ್ಯಶಸ್‌ನಲ್ಲಿ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ 4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ, ಭಾರತ ಮೂರನೇ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾದೇಶ ವಿರುದ್ಧ ನಡೆದ ಸರಣಿಯನ್ನು ಡ್ರಾ ಮಾಡಿಕೊಂಡಿದ್ದ ನ್ಯೂಜಿಲ್ಯಾಂಡ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ಎರಡನೇ ಸ್ಥಾನದಲ್ಲಿದೆ. ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ 119 ಅಂಕಗಳನ್ನು ಹೊಂದಿದೆ ಮತ್ತು ಟೀಂ ಇಂಡಿಯಾದ ಅಂಕ 116 ಇದ್ದು, ಆಸ್ಟ್ರೇಲಿಯಾಗಿಂತ ಮೂರು ಅಂಕ ಕಡಿಮೆಯಿದೆ.
ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸಿರುವ ದಕ್ಷಿಣ ಆಫ್ರಿಕಾ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ. ಇಂಗ್ಲೆಂಡ್ 101 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ಒಂದು ಸ್ಥಾನ ಕುಸಿದು ಆರನೇ ಸ್ಥಾನಕ್ಕೆ ತಲುಪಿದೆ.
ಇದನ್ನೂ ಓದಿ: ಟೆಸ್ಟ್ ರ‍್ಯಾಂಕಿಂಗ್ : 2 ಸ್ಥಾನ ಬಡ್ತಿ ಪಡೆದ ಕೊಹ್ಲಿ, ಅಗ್ರ 10ಕ್ಕೆ ಮರಳಿದ ಬುಮ್ರಾ