ದುಬೈ: ಐಸಿಸಿ ಹೊಸದಾಗಿ ಬಿಡುಗಡೆ ಮಾಡಿದ ಟೆಸ್ಟ್ ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕ್ರಮವಾಗಿ 8, 10 ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ನಂ.1 ಟೆಸ್ಟ್ ಬ್ಯಾಟ್ಸ್ಮನ್ ಆಗಿ ಮುಂದುವರಿದ್ದಾರೆ.
ಬೌಲರ್ಗಳ ಪಟ್ಟಿ: ಬೌಲರ್ಗಳ ಪಟ್ಟಿಯಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬೂಮ್ರಾ 2 ಮತ್ತು 3 ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮಿನ್ಸ್ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನು ಆಲ್ರೌಂಡರ್ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ನಂ.1 ಸ್ಥಾನದಲ್ಲಿ ಅಬಾಧಿತರಾಗಿದ್ದಾರೆ.
ಓದಿ: LSG vs RCB: ರಜತ್ ಅಬ್ಬರದ ಶತಕ... ಲಖನೌ ಗೆಲುವಿಗೆ 208 ರನ್ಗಳ ಬೃಹತ್ ಟಾರ್ಗೆಟ್