ದುಬೈ: ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಇತ್ತೀಚೆಗೆ ಬಿಡುಗಡೆ ಮಾಡಿದ ಏಕದಿನ ರ‍್ಯಾಂಕಿಂಗ್‌ನಲ್ಲಿ ತಮ್ಮ 3ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಬೌಲರ್ ವಿಭಾಗದಲ್ಲಿ ಅನುಭವಿ ಜೂಲನ್ ಗೋಸ್ವಾಮಿ ಕೂಡ 2ನೇ ರ್ಯಾಂಕ್ನಲ್ಲಿಯೇ ಮುಂದುವರಿದಿದ್ದಾರೆ.
ಐಸಿಸಿ ಮಂಗಳವಾರ ನೂತನ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ 738 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಲಿಜೆಲ್ ಲೀ(761) ಮತ್ತು ಆಸ್ಟ್ರೇಲಿಯಾದ ಅಲಿಸಾ ಹೀಲಿ(750) ಮೊದಲೆರಡು ಸ್ಥಾನಗಳಲ್ಲಿ ಮುಂದುವರಿದಿದ್ದಾರೆ. ನೂತನ ರ‍್ಯಾಂಕಿಂಗ್ ಟಾಪ್ 10ರಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಭಾರತದ ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ (710) 7ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆಸೀಸ್ ಸ್ಪಿನ್ನರ್ ಜೆಸ್ ಜೊನಾಸನ್ (76) ಅಗ್ರಸ್ಥಾನದಲ್ಲಿದ್ದು, ಭಾರತದ ಹಿರಿಯ ವೇಗಿ ಜೂಲನ್(727) 2ನೇ ಸ್ಥಾನದಲ್ಲಿದ್ದಾರೆ.
ಭಾರತದ ಪೂನಮ್ ಯಾದವ್ 12, ಶಿಖಾ ಪಾಂಡೆ 14, ದೀಪ್ತಿ ಶರ್ಮಾ 20ನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಶತಕದ ಬಗ್ಗೆ ಚಿಂತೆಯಿಲ್ಲ, ತಂಡಕ್ಕೆ ಅಗತ್ಯವಾದ ರನ್ಗಳಿಸುವುದರಲ್ಲೇ ನನಗೆ ತೃಪ್ತಿ: ಚೇತೇಶ್ವರ್ ಪೂಜಾರ