ದುಬೈ : ಕೋವಿಡ್-19 ಕಾರಣದಿಂದ ಐಸಿಸಿ 2022ರ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯನ್ನು ರದ್ದುಗೊಳಿಸಿದೆ. ಹಾಗಾಗಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ವೆಸ್ಟ್ ತಂಡಗಳು ಪ್ರಸ್ತುತ ಶ್ರೇಯಾಂಕದ ಆಧಾರದ ಮೇಲೆ ವಿಶ್ವಕಪ್ಗೆ ಅರ್ಹತೆಗಿಟ್ಟಿಸಿಕೊಂಡಿವೆ.
ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿರುವುದರಿಂದ ಜಿಂಬಾಬ್ವೆ ಸೇರಿದಂತೆ ಹಲವು ಆಫ್ರಿಕನ್ ರಾಷ್ಟ್ರಗಳು ಪ್ರಯಾಣ ನಿರ್ಬಂಧಗಳನ್ನು ಹೇರುತ್ತಿವೆ.
ಹಾಗಾಗಿ, 9 ತಂಡಗಳ ನಡುವೆ ಜಿಂಬಾಬ್ವೆಯಲ್ಲಿ ನಡೆಯುತ್ತಿದ್ದ ಅರ್ಹತಾ ಟೂರ್ನಿಯನ್ನು ರದ್ದುಗೊಳಿಸಲಾಗಿದೆ. ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ತಂಡಗಳನ್ನು ವಿಶ್ವಕಪ್ಗೆ ಆಯ್ಕೆ ಮಾಡಲಾಗುವುದು ಎಂದು ಐಸಿಸಿ ಪ್ರಕಟಣೆ ಹೊರಡಿಸಿದೆ.
ನ್ಯೂಜಿಲ್ಯಾಂಡ್ನಲ್ಲಿ 2022ಕ್ಕೆ ನಡೆಯಲಿರುವ ಏಕದಿನ ವಿಶ್ವಕಪ್ಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ತಂಡಗಳು ಅರ್ಹತೆ ಪಡೆದಿವೆ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡಗಳು ನೇರ ಅರ್ಹತೆ ಪಡೆದುಕೊಂಡಿವೆ.
ಇದನ್ನೂ ಓದಿ:New Covid variant: ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕೋವಿಡ್ ಕರಿನೆರಳು, ಮುಂದೂಡಿಕೆ?