ಹೈದರಾಬಾದ್: ಐಸಿಸಿ ಏಕದಿನ ವಿಶ್ವಕಪ್ನ 27ನೇಯ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ದುಕೊಂಡು, ಆಸ್ಟ್ರೇಲಿಯಾಗೆ ಬ್ಯಾಟಿಂಗ್ಗೆ ಆಹ್ವಾನಿಸಿದೆ. 5 ಬಾರಿಯ ವಿಶ್ವ ಚಾಂಪಿಯನ್ ಕಾಂಗರೂ ಪಡೆ ಧರ್ಮಶಾಲಾದಲ್ಲಿ ಕಿವೀಸ್ ತಂಡವನ್ನು ಎದುರಿಸಲಿದೆ. ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ 5 ಪಂದ್ಯಗಳನ್ನು ಆಡಿ 4ರಲ್ಲಿ ಗೆಲುವು ಸಾಧಿಸಿ 8 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಮೂರು ಪಂದ್ಯಗಳನ್ನು ಜಯಿಸಿ 6 ಅಂಕದೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಆರಂಭಿಕ ಎರಡು ಪಂದ್ಯಗಳ ಸೋಲಿನೊಂದಿಗೆ ಟೂರ್ನಿ ಆರಂಭ ಮಾಡಿದ ಆಸಿಸ್ ತನ್ನ ಮುಂದಿನ ಮೂರು ಪಂದ್ಯಗಳಲ್ಲಿ ಸತತ ಗೆಲುವು ದಾಖಲಿಸುವ ಮೂಲಕ ಅದ್ಭುತ ಕಮ್ಬ್ಯಾಕ್ ಮಾಡಿದೆ. ಇಂದಿನ ಪಂದ್ಯವನ್ನು ಜಯಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಲು ಕಾಂಗರೂ ಪಡೆ ಯೋಜನೆ ರೂಪಿಸಿದೆ. ಮತ್ತೊಂದೆಡೆ ಕಳೆದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಕಿವೀಸ್ ಪಡೆ ಭಾರತದ ವಿರುದ್ಧ ಸೋಲು ಕಂಡಿದ್ದು, ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಪಿಚ್ ವರದಿ: ಧರ್ಮಶಾಲಾ ಪಿಚ್ನಲ್ಲಿ ವೇಗದ ಬೌಲರ್ಗಳ ಪಾತ್ರ ಮುಖ್ಯವಾಗಿದೆ. ಬ್ಯಾಟರ್ಗಳು ಕ್ರೀಸ್ನಲ್ಲಿ ನೆಲೆಯೂರಲು ಕೆಲ ಸಮಯ ತೆಗದುಕೊಳ್ಳಬಹುದು. ಒಮ್ಮೆ ಬ್ಯಾಟ್ಸ್ಮಾನ್ಗಳು ಕ್ರೀಸ್ಗೆ ಒಗ್ಗಿಕೊಂಡರೆ ದೊಡ್ಡ ಮೊತ್ತದ ಸ್ಕೋರ್ ಕೆಲೆಹಾಕಬಲ್ಲರು. ಆಟ ಮುಂದುವರೆದಂತೆ ಸ್ಪಿನ್ನರ್ಗಳೂ ಹಿಡಿತ ಸಾಧಿಸಬಹುದಾಗಿದೆ. ಈ ಮೈದಾನದಲ್ಲಿ ನಡೆದ ಹಿಂದಿನ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದಲ್ಲಿ ವೇಗಿ ಮೊಹ್ಮದ್ ಶಮಿ 5 ವಿಕೆಟ್ಗಳನ್ನು ಪಡೆದಿದ್ದರು. ಒಟ್ಟಾರೆ ಪಂದ್ಯದಲ್ಲಿ ವೇಗದ ಬೌಲರ್ಗಳು 11 ವಿಕೆಟ್ಗಳನ್ನು ಉರಳಿಸಿದ್ದರೆ, ಸ್ಪಿನ್ನರ್ಗಳು 3 ವಿಕೆಟ್ಗಳನ್ನು ಪಡೆದಿದ್ದರು.
ಧರ್ಮಶಾಲಾ ಸ್ಟೇಡಿಯಂ ಅಂಕಿ - ಅಂಶ: ಧರ್ಮಶಾಲಾದಲ್ಲಿ ಈವರೆಗೂ ಒಟ್ಟು 8 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 3 ಬಾರಿ ಗೆಲುವು ದಾಖಲಿಸಿದರೆ, ಎರಡನೇ ಬ್ಯಾಟಿಂಗ್ ಮಾಡಿದ ತಂಡ 5 ಬಾರಿ ಗೆದ್ದಿದೆ. ಇಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 211 ರನ್ ಆಗಿದೆ. ಈ ಮೈದಾನದಲ್ಲಿ ದಾಖಲಾದ ಹೈಸ್ಕೋರ್ 364 ಆಗಿದ್ದು, ಲೋಸ್ಕೋರ್ 112 ಆಗಿದೆ.
ಹವಾಮಾನ ವರದಿ: ಧರ್ಮಶಾಲಾದಲ್ಲಿಂದು ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಳೆಯ ಸಾಧ್ಯತೆ ಕಡಿಮೆ ಇದ್ದು, ಸಂಜೆ ಸಮಯ ಇಬ್ಬನಿ ಬೀಳುವ ಸಾಧ್ಯತೆ ಹೆಚ್ಚಿದೆ.
ಹೆಡ್ ಟೂ ಹೆಡ್: ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾದ ದಾಖಲೆ ಉತ್ತಮವಾಗಿದೆ. ಉಭಯ ತಂಡಗಳ ನಡುವೆ ಈ ವರೆಗೂ ಒಟ್ಟು 141 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ ಕಾಂಗರೂ ಪಡೆ 95 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ನ್ಯೂಜಿಲೆಂಡ್ ಕೇವಲ 39 ಪಂದ್ಯಗಳನ್ನು ಗೆದ್ದಿದೆ. 7 ಪಂದ್ಯಗಳು ರದ್ದುಗೊಂಡಿವೆ.
ವಿಶ್ವಕಪ್‌ನಲ್ಲೂ ಕಿವೀಸ್ ವಿರುದ್ಧ ಆಸ್ಟ್ರೇಲಿಯಾ ಪ್ರಾಬಲ್ಯ ಸಾಧಿಸಿದೆ. ಈ ವರೆಗೂ ಉಭಯ ತಂಡಗಳು 11 ಬಾರಿ ವಿಶ್ವಕಪ್ನಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಕಿವೀಸ್ ಮೂರರಲ್ಲಿ ಮಾತ್ರ ಗೆದ್ದಿದೆ. ನ್ಯೂಜಿಲೆಂಡ್ 6 ವರ್ಷಗಳ ಹಿಂದೆ ಅಂದರೇ 2017 ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ತಂಡವನ್ನು ಏಕದಿನ ಪಂದ್ಯದಲ್ಲಿ ಮಣಿಸಿತ್ತು.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್(ವಿ.ಕೀ), ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ವಿ.ಕೀ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಪಂದ್ಯ ಆರಂಭ: 10.30ಕ್ಕೆ
ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಹೊಸ ಆಲ್ರೌಂಡರ್ ಹುಡುಕಾಟ: ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಅಭ್ಯಾಸ!