ಮುಂಬೈ, ಮಹಾರಾಷ್ಟ್ರ: ಇಂಗ್ಲೆಂಡ್ ವಿರುದ್ಧ ಅಬ್ಬರಿಸಿದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಈ ಬಾರಿ ತವರು ನೆಲದಲ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಲ್ಕು ರನ್ ಗಳಿಸಿ ಔಟಾಗಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ಮಧುಶಂಕ ಎಸೆದ ಮೊದಲ ಎಸೆತವನ್ನು ಬೌಂಡರಿ ಬಾರಿಸಿದ್ದ ರೋಹಿತ್ ಶರ್ಮಾ ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಹಾದಿ ಹಿಡಿದರು. ಈ ಮೂಲಕ ಭಾರತ 4 ರನ್ ಕಲೆ ಹಾಕಿರುವಾಗಲೇ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಅನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಗಿಲ್ ಜೊತೆ ವಿರಾಟ್ ಕೊಹ್ಲಿ ಕ್ರೀಸ್ನಲ್ಲಿ ಬ್ಯಾಟಿಂಗ್ ಮುಂದುವರಿಸಿದ್ದಾರೆ.
ಭಾರತ ಏಕದಿನ ವಿಶ್ವಕಪ್ 2023 ರಲ್ಲಿ (Cricket World Cup) ಇದುವರೆಗೆ ಆಡಿದ ಎಲ್ಲ ಆರು ಪಂದ್ಯಗಳನ್ನು ಗೆದ್ದಿದೆ. ಇತ್ತಿಚೇಗೆ ಲಖನೌ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನಿರ್ಣಾಯಕ ಸಮಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದರು. ಸಂಘಟಿತ ಬೌಲಿಂಗ್ ದಾಳಿ, ಆಟಗಾರರ ಉತ್ತಮ ಪ್ರದರ್ಶನದಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವುದು ಗೊತ್ತಿರುವ ಸಂಗತಿ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 87 ರನ್ ಗಳಿಸಿದ್ದರು. ದೊಡ್ಡ ಹೊಡೆತ ಹೊಡೆಯಲು ಹೋಗಿ ಔಟಾಗುವ ಮೂಲಕ ಶತಕ ವಂಚಿತರಾದರು. ಇಂದು ಶ್ರೀಲಂಕಾ ವಿರುದ್ಧ ಹೋಮ್ ಪಿಚ್ನಲ್ಲಿ ರೋಹಿತ್ ಶರ್ಮಾ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿತ್ತು. ಆದರೆ ಕೇವಲ ನಾಲ್ಕು ರನ್ಗಳಿಗೆ ಔಟಾಗುವ ಮೂಲಕ ಹಿಟ್ಮ್ಯಾನ್ ಅಭಿಮಾನಿಗಳಿಗೆ ನಿರಾಸೆ ಮೂಡಿದ್ದಾರೆ.
ರೋಹಿತ್ ಶರ್ಮಾರ ಅವರ ಅದ್ಭುತ ಆಟದ ಪ್ರದರ್ಶನಕ್ಕಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು. ಈ ವಿಶ್ವಕಪ್ ಪಂದ್ಯಾವಳಿಯಲ್ಲಿ ರೋಹಿತ್ಗೆ ಇದು ಎರಡನೇ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿದೆ. ಮುಂಬೈನ ಆರಂಭಿಕ ಆಟಗಾರ ಇಲ್ಲಿಯವರೆಗೆ ನಡೆದ ಏಕದಿನ ವಿಶ್ವಕಪ್‌ಗಳಲ್ಲಿ ತಮ್ಮ ಏಳನೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಈ ಪ್ರಶಸ್ತಿ ಪಡೆಯುವ ಮೂಲಕ ಅವರು ಗ್ಲೆನ್ ಮೆಕ್‌ಗ್ರಾತ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿರುವುದು ತಿಳಿದ ವಿಚಾರ. ಏಕದಿನ ವಿಶ್ವಕಪ್‌ಗಳ ಇತಿಹಾಸದಲ್ಲಿ ಒಂಬತ್ತು ಪಂದ್ಯಶ್ರೇಷ್ಠ ಪ್ರಶಸ್ತಿಗಳೊಂದಿಗೆ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಅವರ ದಾಖಲೆಯನ್ನು ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನೂ ಎರಡು ಹೆಜ್ಜೆ ಬೇಕಾಗಿದೆ.
ಓದಿ: ವಿಶ್ವಕಪ್ ಕ್ರಿಕೆಟ್: ಸೆಮಿ ಫೈನಲ್‌ಗೆ ಇನ್ನೊಂದೇ ಹೆಜ್ಜೆ! ಶ್ರೇಯಸ್ಗಿದು ಕೊನೆಯ ಅವಕಾಶವೇ?