ETV Bharat / sports

ದೇಶ ನಿಮ್ಮನ್ನು ನೋಡಿ ಹೆಮ್ಮೆ ಪಡುತ್ತಿದೆ, ತಲೆ ಎತ್ತಿ ಓಡಾಡಿ: ರೋಹಿತ್ ಶರ್ಮಾಗೆ ಧೈರ್ಯ ತುಂಬಿದ ಕಪಿಲ್​ ದೇವ್​ - ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Kapil Dev: ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ನೀರು ತುಂಬಿದ ಕಣ್ಣುಗಳನ್ನು ಗಮನಿಸಿರುವ ಹಿರಿಯ ಕ್ರಿಕೆಟಿಗ ಕಪಿಲ್ ದೇವ್ ಧೈರ್ಯ ಹೇಳಿದ್ದಾರೆ.

kapil dev message  Indian captain rohit sharma eyes  kapil dev news  ದೇಶ ನಿಮ್ಮನ್ನು ನೋಡಿ ಹೆಮ್ಮೆ ಪಡುತ್ತಿದೆ  ಮಾಜಿ ನಾಯಕ ಕಪಿಲ್​ ದೇವ್​ ಲೆಜೆಂಡರಿ ಆಟಗಾರ ಕಪಿಲ್ ದೇವ್  ವಿಶ್ವಕಪ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ರೋಹಿತ್ ಸೇನೆ  ಭವಿಷ್ಯದಲ್ಲಿ ಹೆಚ್ಚಿನ ಯಶಸ್ಸು ನಿಮಗೆ ಕಾಯುತ್ತಿದೆ  ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ  ರೋಹಿತ್ ಶರ್ಮಾ ಅವರ ಕಣ್ಣಲ್ಲಿ ನೀರು
ಮಾಜಿ ನಾಯಕ ಕಪಿಲ್​ ದೇವ್​
author img

By ETV Bharat Karnataka Team

Published : Nov 21, 2023, 10:10 AM IST

ನವದೆಹಲಿ: ಹಿರಿಯ ಕ್ರಿಕೆಟಿಗ ಕಪಿಲ್ ದೇವ್ ಅವರು ವಿಶ್ವಕಪ್‌ನಲ್ಲಿ ರನ್ನರ್ ಅಪ್ ಸ್ಥಾನ ಪಡೆದ ರೋಹಿತ್ ತಂಡದ ಗುಣಗಾನ ಮಾಡಿದ್ದಾರೆ. 1983ರ ವಿಶ್ವಕಪ್ ವಿಜೇತ ತಂಡದ ನಾಯಕರಾದ ಕಪಿಲ್ ದೇವ್, ಭಾರತ ತಂಡದ ಪ್ರದರ್ಶನದ ಬಗ್ಗೆ ದೇಶವೇ ಹೆಮ್ಮೆ ಪಡುತ್ತಿದೆ ಎಂದರು.

ನೀವು ಚಾಂಪಿಯನ್‌ಗಳಂತೆ ಆಡಿದ್ದೀರಿ. ಹೆಮ್ಮೆಯಿಂದ ತಲೆ ಎತ್ತಿ ನಡೆಯಿರಿ. ನಿಮ್ಮ ಮನಸ್ಸಿನಲ್ಲಿ ಟ್ರೋಫಿಯನ್ನು ಹೊರತುಪಡಿಸಿ ಬೇರಾವುದೇ ಆಲೋಚನೆ ಇರಲಿಲ್ಲ. ನೀವು ಎಂದೆಂದಿಗೂ ವಿಜೇತರೇ. ನಿಮ್ಮ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ರೋಹಿತ್, ನಿಮ್ಮ ಕೆಲಸದಲ್ಲಿ ಮಾಸ್ಟರ್​ ನೀವು. ಭವಿಷ್ಯದಲ್ಲಿ ಹೆಚ್ಚಿನ ಯಶಸ್ಸು ನಿಮಗೆ ಕಾಯುತ್ತಿದೆ. ಇದು ಕಷ್ಟದ ಸಮಯ ಎಂದು ನನಗೆ ಗೊತ್ತು. ಆದರೆ ಉತ್ಸಾಹ ಕಳೆದುಕೊಳ್ಳಬೇಡಿ. ಭಾರತ ನಿಮಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ.

'ಕೆಲವೊಮ್ಮೆ ಮರೆತುಬಿಡುತ್ತಾರೆ': ಆತಿಥೇಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ವಿಶ್ವಕಪ್ ಕ್ರಿಕೆಟ್ ಫೈನಲ್‌ಗೆ ನನಗೆ ಆಹ್ವಾನ ನೀಡಿರಲಿಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಭಾನುವಾರ ಹೇಳಿದ್ದರು. 1983ರಲ್ಲಿ ಮೊದಲ ಬಾರಿಗೆ ಭಾರತ ವಿಶ್ವಕಪ್ ಗೆದ್ದಾಗ ತಂಡದ ನಾಯಕರಾಗಿದ್ದ ದೇವ್, ತಾವು ಆಗಿನ ತಂಡದ ಇತರೆ ಆಟಗಾರರ ಜೊತೆಗೆ ಈ ಪಂದ್ಯ ನೋಡಲು ಬಯಸಿದ್ದಾಗಿ ತಿಳಿಸಿದ್ದರು. "ನನಗೆ ಆಹ್ವಾನ ಕೊಟ್ಟಿರಲಿಲ್ಲ. ಯಾರೂ ಕೂಡಾ ಕರೆ ಮಾಡಿಲ್ಲ. ಹೀಗಾಗಿ, ನಾನು ಹೋಗಿಲ್ಲ ಅಷ್ಟೇ. 1983ರಲ್ಲಿ ನಾನು ಗೆದ್ದ ತಂಡದ ಆಟಗಾರರೊಂದಿಗೆ ವಿಶ್ವಕಪ್ ಫೈನಲ್‌ ಪಂದ್ಯಕ್ಕೆ ಹೋಗಬೇಕೆಂದಿದ್ದೆ. ಇದು ಬಹಳ ದೊಡ್ಡ ಕಾರ್ಯಕ್ರಮ. ಅಲ್ಲಿರುವವರೆಲ್ಲರೂ ಜವಾಬ್ದಾರಿ ನಿರ್ವಹಿಸುವಲ್ಲಿ ನಿರತರಾಗಿರುತ್ತಾರೆ. ಕೆಲವೊಮ್ಮೆ ಅವರು ಮರೆತುಬಿಡುತ್ತಾರೆ" ಎಂದು ಕಪಿಲ್‌ ದೇವ್ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ್ದರು.

ಮಾಜಿ ನಾಯಕ ಸೌರವ್‌ ಗಂಗೂಲಿ ಅವರನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮಾಜಿ ಅಧ್ಯಕ್ಷರೆಂಬ ಹಿನ್ನೆಲೆಯಲ್ಲಿ ಆಹ್ವಾನಿಸಲಾಗಿತ್ತು. ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐನ ಸಂಪ್ರದಾಯ. ಪಂದ್ಯ ವೀಕ್ಷಣೆ ವೇಳೆ ಹಾಜರಿದ್ದ ಇತರೆ ಗಣ್ಯರಲ್ಲಿ ಶಾರೂಕ್‌ ಖಾನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಬ್ಯಾಡ್ಮಿಂಟನ್ ದಿಗ್ಗಜ ಪ್ರಕಾಶ್ ಪಡುಕೋಣೆ ಇದ್ದರು.

ಇನ್ನೊಂದೆಡೆ, ಕಪಿಲ್ ದೇವ್ ಹೇಳಿಕೆಯ ನಂತರ ವಿವಾದ ತೀವ್ರಗೊಂಡಿತ್ತು. ಕಪಿಲ್ ವಿಶ್ವ ವಿಜೇತ ನಾಯಕ. ಅವರನ್ನು ಈ ರೀತಿ ಕರೆಯದಿರುವುದು ಅವಮಾನಕರ. ಟೀಂ ಇಂಡಿಯಾದಲ್ಲಿ ಕ್ರಿಕೆಟ್ ಆಡಲು ಉತ್ತಮ ಸೌಲಭ್ಯಗಳಿಲ್ಲದ ಹಾಗೂ ಭಾರತೀಯ ಕ್ರಿಕೆಟ್ ಮಂಡಳಿಗೆ ಹಣವಿಲ್ಲದ ಸಮಯದಲ್ಲಿ ಅವರು ದೇಶವನ್ನು ವಿಶ್ವ ಚಾಂಪಿಯನ್ ಮಾಡಿದರು. ವಿಶ್ವವಿಜೇತ ನಾಯಕನೊಂದಿಗೆ ಬಿಸಿಸಿಐನ ಇಂತಹ ವರ್ತನೆ ಖಂಡನೀಯ ಎಂಬ ಆಕ್ರೋಶ ವ್ಯಕ್ತವಾಗಿತ್ತು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಐಸಿಸಿ ವಿಶ್ವಕಪ್ 2023ರಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿತ್ತು. 2023ರ ವಿಶ್ವಕಪ್‌ನ ಸೆಮಿಫೈನಲ್ ಹಂತದಲ್ಲಿ ನ್ಯೂಜಿಲೆಂಡ್ ವಿರುದ್ಧ 2019ರ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿತ್ತು. ಸಚಿನ್ ತೆಂಡೂಲ್ಕರ್ ನಂತರ ರೋಹಿತ್​ ಶರ್ಮಾ ವಿಶ್ವಕಪ್‌ನ ಎರಡು ಆವೃತ್ತಿಗಳಲ್ಲಿ 500ಕ್ಕೂ ಹೆಚ್ಚು ರನ್ ಗಳಿಸಿದ ಎರಡನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು.

ಆರಂಭಿಕ ಆಟಗಾರರೂ ಆಗಿರುವ ರೋಹಿತ್ ಶರ್ಮಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. 11 ಪಂದ್ಯಗಳಲ್ಲಿ 54.27 ಸರಾಸರಿಯಲ್ಲಿ 597 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಸೇರಿದಂತೆ ಆರು ಭಾರತೀಯ ಆಟಗಾರರು ಐಸಿಸಿ ವಿಶ್ವಕಪ್ ಇಲೆವೆನ್‌ನಲ್ಲಿ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್​ ಸೋತರೂ ರೋಹಿತ್​ ನಾಯಕತ್ವಕ್ಕಿಲ್ಲ ಕುತ್ತು: ಇದೇ ಕಾರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.