ಅಹಮದಾಬಾದ್ (ಗುಜರಾತ್): ಕ್ರಿಕೆಟ್ ವಿಶ್ವಕಪ್ 2023ರ ಹಬ್ಬ ಪ್ರಾರಂಭವಾಗಿದೆ. ಕುತೂಹಲಕಾರಿಯಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 14 ರಂದು ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡವು ಇಲ್ಲಿಯವರೆಗೆ ಟೂರ್ನಿಯಲ್ಲಿ ಅಜೇಯವಾಗಿದ್ದು, ಪಂದ್ಯದಲ್ಲೂ ತಮ್ಮ ಗೆಲುವಿನ ಆವೇಗವನ್ನು ಮುಂದುವರಿಸಲು ಪ್ರಯತ್ನಿಸುತ್ತಿದೆ. ಮತ್ತೊಂದೆಡೆ, ಹೈದರಾಬಾದ್‌ನಲ್ಲಿ ನಡೆದ ಹಿಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ಚೇಸಿಂಗ್ ಮಾಡಿ ಗೆದ್ದಿದ್ದರಿಂದ ಪಾಕಿಸ್ತಾನದ ಆತ್ಮವಿಶ್ವಾಸವು ಹೆಚ್ಚಾಗಿದೆ.
ಗೆಲುವಿನ ನಿರೀಕ್ಷೆಯಲ್ಲಿರುವ ಪಾಕ್ ತಂಡ: ಎರಡೂ ತಂಡಗಳು ಅಹಮದಾಬಾದ್‌ಗೆ ಆಗಮಿಸಿವೆ. ಆದರೆ, ಭಾರತವು ಸ್ಥಳದಲ್ಲಿ ಅಭ್ಯಾಸ ಮಾಡಿಲ್ಲ. ಪಾಕಿಸ್ತಾನವು ಗುರುವಾರ ಇಲ್ಲಿ ಕಠಿಣ ಅಭ್ಯಾಸ ನಡೆಸಿತು. ನಿನ್ನೆ ಸಂಜೆ 6ರಿಂದ 9ರವರೆಗೆ ಪಾಕಿಸ್ತಾನ ತಂಡ ಅಭ್ಯಾಸ ನಡೆಸಿತು. ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅವರು ಸೆನ್ಸೇಷನಲ್ ಟಚ್‌ನಲ್ಲಿದ್ದಾರೆ ಮತ್ತು ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಪಂದ್ಯದಲ್ಲಿ ಅವರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಕಳಪೆ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದಾರೆ. ಈಗಾಗಲೇ ಪಾಕಿಸ್ತಾನ ನೆದರ್ಲೆಂಡ್ಸ್ ಮತ್ತು ಶ್ರೀಲಂಕಾವನ್ನು ಸೋಲಿಸಿರುವ ಬಾಬರ್ ಅಜಮ್ ಪಡೆಯು ತಮ್ಮ ತಂಡದ ಗೆಲುವಿನ ನಿರೀಕ್ಷೆಯಲ್ಲಿದೆ.
ಗೆಲುವಿನ ಅಭಿಯಾನ ಮುಂದುವರಿಸಲಿದೆ ಭಾರತ: ಕ್ರಿಕೆಟ್ ವಿಶ್ವಕಪ್ 2023 ರ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಭಾರತ-ಪಾಕಿಸ್ತಾನ ನಡುವಿನ ಪಂದ್ಯವು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬಕ್ಕಿಂತ ಹೆಚ್ಚು ಖುಷಿ ಕೊಡಲಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರ ಮೇಲೆ ತುಂಬಾ ಒತ್ತಡವಿದೆ. ಭಾರತ ತಂಡ ಅಹಮದಾಬಾದ್ ತಲುಪಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಅಮೋಘ ಪಂದ್ಯ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತ ತಂಡದ ಆತ್ಮಿವಿಶ್ವಾಸ ಉತ್ತುಂಗದಲ್ಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ತನ್ನ ಗೆಲುವಿನ ಅಭಿಯಾನವನ್ನು ಮುಂದುವರಿಸುವ ಗುರಿಯನ್ನು ಭಾರತದ ಹೊಂದಿದೆ.
ಗೆಲುವಿನ ದಾಖಲೆ ನಿರ್ಮಿಸುವ ಸಾಧ್ಯತೆ: ಒಡಿಐ ವಿಶ್ವಕಪ್‌ನಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಗೆಲುವಿನ ದಾಖಲೆಯನ್ನು ನಿರ್ಮಿಸುವ ಸಾಧ್ಯತೆಯಿದೆ. ಪಂದ್ಯಾವಳಿಯಲ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಅಲ್ಲದೆ, ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾದಾಗ ಭಾರತ 89 ರನ್‌ಗಳಿಂದ ಜಯ ಸಾಧಿಸಿತ್ತು. ರೋಹಿತ್ ಶರ್ಮಾ 140 ರನ್‌ಗಳ ಅಮೋಘ ಆಟವಾಡಿ, ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೂಡ 77 ರನ್‌ಗಳನ್ನು ಗಳಿಸಿ ಮಿಂಚು ಹರಿಸಿದ್ದರು.
ಇದನ್ನೂ ಓದಿ: gold World Cup trophy: ಕೇವಲ 0.9 ಗ್ರಾಂ ಚಿನ್ನದಲ್ಲಿ ವಿಶ್ವಕಪ್ ಟ್ರೋಫಿಯ ಮಾದರಿ ತಯಾರಿಸಿದ ಅಕ್ಕಸಾಲಿಗ