ETV Bharat / sports

ಇಂಡಿಯಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ: ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಟೀಂ ಇಂಡಿಯಾ ಭರ್ಜರಿ ಅಭ್ಯಾಸ

ಭಾರತ- ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿಯು ಮಾರ್ಚ್ 17ರಿಂದ ಪ್ರಾರಂಭ- ಶುಕ್ರವಾರ ವಾಂಖೆಡೆಯಲ್ಲಿ ನಡೆಯಲಿದೆ ಮೊದಲ ಏಕದಿನ ಪಂದ್ಯ- ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸಲು ಟೀಂ ಇಂಡಿಯಾ ಭರ್ಜರಿ ಕಸರತ್ತು.

IND vs AUS First ODI
ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಟೀಂ ಇಂಡಿಯಾ ಭರ್ಜರಿ ಅಭ್ಯಾಸ
author img

By

Published : Mar 16, 2023, 8:03 PM IST

ನವದೆಹಲಿ: ನಾಳೆಯಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ನಾಯಕರಾಗಿ ತಂಡವನ್ನು ಮನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಈ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಜೊತೆಗೆ ಬೆನ್ನು ನೋವಿನ ಕಾರಣ ಶ್ರೇಯಸ್ ಅಯ್ಯರ್ ಕೂಡ ಸರಣಿಯಿಂದ ಹೊರಗುಳಿದಿದ್ದಾರೆ. ಮದುವೆ ಬಳಿಕ ಶಾರ್ದೂಲ್ ಠಾಕೂರ್ ಭಾರತ ತಂಡಕ್ಕೆ ಮರಳಿದ್ದಾರೆ.

ಭಾರತ ತಂಡ ಭರ್ಜರಿ ಕಸರತ್ತು: ಭಾರತ- ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಪಂದ್ಯಗಳ ಸರಣಿಯು ಮಾರ್ಚ್ 17ರಿಂದ ಆರಂಭವಾಗಲಿದೆ. ಶುಕ್ರವಾರ ವಾಂಖೆಡೆಯಲ್ಲಿ ಮೊದಲ ಏಕದಿನ ಪಂದ್ಯ ಜರುಗಲಿದೆ. ಆಸ್ಟ್ರೇಲಿಯಾ ವಿರುದ್ಧ ಗೆಲುವು ದಾಖಲಿಸಲು ಭಾರತ ತಂಡ ಭರ್ಜರಿ ಕಸರತ್ತು ನಡೆಸುತ್ತಿದೆ.

ಭಾರತ-ಆಸ್ಟ್ರೇಲಿಯಾ ನಡುವೆ 143 ಓಡಿಐ ಪಂದ್ಯಗಳು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 143 ಏಕದಿನ ಪಂದ್ಯಗಳು ನಡೆದಿವೆ. ಈ ಪಂದ್ಯಗಳಲ್ಲಿ ಕಾಂಗರೂಗಳು ಪ್ರಾಬಲ್ಯ ಮೆರೆದಿದ್ದಾರೆ. ಆಸ್ಟ್ರೇಲಿಯಾ 80 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ 53 ಪಂದ್ಯಗಳನ್ನು ಗೆದ್ದಿದೆ. 10 ಪಂದ್ಯಗಳು ಅಪೂರ್ಣವಾಗಿವೆ.

ಆಸ್ಟ್ರೇಲಿಯಾ ಕ್ರಿಕೆಟ್ ಜಗತ್ತಿನ ಬಲಿಷ್ಠ ತಂಡವಾಗಿದೆ. ಕಾಂಗರೂಗಳು 12 ಓಡಿಐ ವಿಶ್ವಕಪ್‌ಗಳಲ್ಲಿ 5 ಅನ್ನು ಗೆದ್ದಿದ್ದಾರೆ (1987, 1999, 2003, 2007, 2015). ಅದೇ ಸಮಯದಲ್ಲಿ, ಟೀಂ ಇಂಡಿಯಾ ಎರಡು ವಿಶ್ವಕಪ್‌ಗಳನ್ನು ಗೆದ್ದಿದೆ (1983, 2011).

ಇದನ್ನೂ ಓದಿ: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್​: ಐಪಿಎಲ್​ನಿಂದಲೂ ಹೊರಗುಳಿಯುವ ಸಾಧ್ಯತೆ

43 ವರ್ಷಗಳ ಹಿಂದೆ ನಡೆದಿತ್ತು ಮೊದಲ ಓಡಿಐ ಪಂದ್ಯ: 43 ವರ್ಷಗಳ ಹಿಂದೆ, ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯವು 6 ಡಿಸೆಂಬರ್ 1980 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದಿತ್ತು. ಈ ಪಂದ್ಯವನ್ನು ಭಾರತ 66 ರನ್‌ಗಳಿಂದ ಗೆದ್ದುಕೊಂಡಿತ್ತು. ಇದಾದ ಬಳಿಕ ಆಸ್ಟ್ರೇಲಿಯಾದಲ್ಲಿ ಭಾರತದ ಪ್ರದರ್ಶನ ನಿರಾಶದಾಯಕವಾಗಿದೆ.

ಆಸ್ಟ್ರೇಲಿಯಾದಲ್ಲಿ ಆಡಿದ 54 ಪಂದ್ಯಗಳಲ್ಲಿ ಟೀಂ ಇಂಡಿಯಾ 14 ಪಂದ್ಯಗಳನ್ನು ಗೆದ್ದಿದೆ. ಭಾರತ ತನ್ನದೇ ನೆಲದಲ್ಲಿಯೂ ಆಸ್ಟ್ರೇಲಿಯಾ ವಿರುದ್ಧ ಯಾವುದೇ ವಿಶೇಷ ಪ್ರದರ್ಶನ ನೀಡಿಲ್ಲ. ಭಾರತದಲ್ಲಿ ಇಬ್ಬರ ನಡುವೆ 64 ಪಂದ್ಯಗಳು ನಡೆದಿದ್ದು, ಇದರಲ್ಲಿ ಆಸ್ಟ್ರೇಲಿಯಾ 30 ಮತ್ತು ಭಾರತ 29 ಪಂದ್ಯಗಳಲ್ಲಿ ಗೆದ್ದಿದೆ.

ಇದನ್ನೂ ಓದಿ: ಡೇವಿಡ್ ವಾರ್ನರ್ ಅರಸಿ ಬಂದ ಅದೃಷ್ಟ! ದೆಹಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆ

ಭಾರತ ತಂಡದಲ್ಲಿರುವ ಆಟಗಾರರು: ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಾಯ್‌ದೇವ್ ಉನ್ದ್ಕತ್ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಅವರು ಭಾರತ ತಂಡದಲ್ಲಿ ಆಡಲಿದ್ದಾರೆ.

ಇದನ್ನೂ ಓದಿ: IND vs AUS, ODI Series: ವಿಶ್ವಕಪ್​ ತಯಾರಿ, ಟೀಂ ಇಂಡಿಯಾ ಪಾಲಿಗೆ ಮಹತ್ವದ ಸರಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.