ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ಆರಂಭವಾಗಲಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ಭಾರಿ ಮಳೆಯಾಗುತ್ತಿದ್ದು, ಪಂದ್ಯದ ವೇಳೆಯೂ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಈ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಟ್ವೀಟ್ ಮಾಡಿದ್ದು, ಮಳೆಯಿಂದಾಗಿ ಪಂದ್ಯ ವಿಳಂಬವಾಗಿ ಪ್ರಾರಂಭವಾಗಲಿದೆ. ಸದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಆರಂಭವಾಗಬೇಕಿತ್ತು. ಆದರೆ 3 ಗಂಟೆ ಆದರೂ ಶುರುವಾಗಿಲ್ಲ.
ಲಖನೌದ ಏಕಾನಾ ಸ್ಟೇಡಿಯಂನಲ್ಲಿನ ಪಿಚ್ ಸಮತೋಲಿತವಾಗಿದ್ದು, ಬ್ಯಾಟ್ಸ್‌ಮನ್‌ಗಳಿಗೆ ಸ್ವಲ್ಪ ಅನುಕೂಲಕರವಾಗಿದೆ. ಕಪ್ಪು ಮಣ್ಣಿನ ಪಿಚ್ ಇದಾಗಿದ್ದು, ಇದರಿಂದ ವೇಗದ ಬೌಲರ್‌ಗಳು ಮತ್ತು ಸ್ಪಿನ್ನರ್‌ಗಳಿಗೂ ಅನುಕೂಲವಾಗಲಿದೆ.
ಭಾರತ ತಂಡ : ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿ.ಕೀ), ಸಂಜು ಸಾಮ್ಸನ್ (ವಿ.ಕೀ), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್ ಮತ್ತು ದೀಪಕ್ ಚಾಹರ್.
ದಕ್ಷಿಣ ಆಫ್ರಿಕಾ ತಂಡ : ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಜಾನೆಮನ್ ಮಾಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಎನ್ರಿಕ್ ನಾರ್ಖಿಯಾ, ವೇಯ್ನ್ ಪಾರ್ನೆಲ್, ಆಂಡಿಲೆ ಫೆಹ್ಲುಕ್ವಾಯೊ,ಡ್ವೇನ್ ಪ್ರೆಟೋರಿಯಸ್,ಕಗಿಸೋ ರಬಾಡ, ತಬ್ರೇಜ್ ಶಮ್ಸಿ.
ಇದನ್ನೂ ಓದಿ :ಐಸಿಸಿ ಟಿ20 ವಿಶ್ವಕಪ್: 15 ನೇ ಆಟಗಾರನಿಲ್ಲದೇ ಆಸ್ಟ್ರೇಲಿಯಾಕ್ಕೆ ಹಾರಿದ ಟೀಂ ಇಂಡಿಯಾ