ಮುಂಬೈ: ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಸರಣಿ ಬೆನ್ನಲ್ಲೇ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಮೊದಲು ಏಕದಿನ ಸರಣಿಯಲ್ಲಿ ಭಾಗಿಯಾಗಲಿರುವ ಭಾರತ ತದ ನಂತರ ಟಿ-20 ಸರಣಿ ಆಡಲಿದೆ. ಅದಕ್ಕಾಗಿ ಆಯ್ಕೆ ಸಮಿತಿಯಿಂದ 18 ಸದಸ್ಯರ ತಂಡ ಪ್ರಕಟಿಸಲಾಗಿದೆ. ಮುಖ್ಯವಾಗಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಆರ್ ಅಶ್ವಿನ್ ಕಮ್ಬ್ಯಾಕ್ ಮಾಡಿದ್ದಾರೆ. ಇವರ ಜೊತೆಗೆ ಚೈನಾಮ್ಯಾನ್ ಖ್ಯಾತಿಯ ಕುಲ್ದೀಪ್ ಯಾದವ್ ಸಹ ಅವಕಾಶ ಪಡೆದುಕೊಂಡಿದ್ದಾರೆ.
-
Rohit Sharma (C), I Kishan, KL Rahul*, Suryakumar Yadav, D Hooda, S Iyer, D Karthik, R Pant, H Pandya, R Jadeja, Axar Patel, R Ashwin, R Bishnoi, Kuldeep Yadav*, B Kumar, Avesh Khan, Harshal Patel, Arshdeep Singh.
— BCCI (@BCCI) July 14, 2022 " class="align-text-top noRightClick twitterSection" data="
*Inclusion of KL Rahul & Kuldeep Yadav is subject to fitness.
">Rohit Sharma (C), I Kishan, KL Rahul*, Suryakumar Yadav, D Hooda, S Iyer, D Karthik, R Pant, H Pandya, R Jadeja, Axar Patel, R Ashwin, R Bishnoi, Kuldeep Yadav*, B Kumar, Avesh Khan, Harshal Patel, Arshdeep Singh.
— BCCI (@BCCI) July 14, 2022
*Inclusion of KL Rahul & Kuldeep Yadav is subject to fitness.Rohit Sharma (C), I Kishan, KL Rahul*, Suryakumar Yadav, D Hooda, S Iyer, D Karthik, R Pant, H Pandya, R Jadeja, Axar Patel, R Ashwin, R Bishnoi, Kuldeep Yadav*, B Kumar, Avesh Khan, Harshal Patel, Arshdeep Singh.
— BCCI (@BCCI) July 14, 2022
*Inclusion of KL Rahul & Kuldeep Yadav is subject to fitness.
ರೋಹಿತ್ ಶರ್ಮಾ ನಾಯಕತ್ವದ 18 ಸದಸ್ಯರ ತಂಡ ಪ್ರಕಟಿಸಲಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದ ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ. ಇದರ ಬೆನ್ನಲ್ಲೇ ಅವಕಾಶ ವಂಚಿತರಾಗಿದ್ದ ಆರ್.ಅಶ್ವಿನ್ಗೂ ಮಣೆ ಹಾಕಲಾಗಿದೆ. ಆದರೆ, ಏಕದಿನ ಹಾಗೂ ಟಿ -20 ಸರಣಿಯಿಂದ ಬುಮ್ರಾ ಹಾಗೂ ಕೊಹ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.
ಟಿ-20 ತಂಡ ಇಂತಿದೆ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್(ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಆರ್.ಅಶ್ವಿನ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್,ಅರ್ಷದೀಪ್ ಸಿಂಗ್
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ. ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ಜಸ್ಪ್ರೀತ್ ಬುಮ್ರಾಗೂ ವಿಶ್ರಾಂತಿ ನೀಡಲಾಗಿದೆ. ಇದರ ಜೊತೆಗೆ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ಗೂ ಮಣೆ ಹಾಕಿಲ್ಲ. ಹೀಗಾಗಿ, ತಂಡವನ್ನ ಶಿಖರ್ ಧವನ್ ಮುನ್ನಡೆಸಲಿದ್ದಾರೆ.
ಏಕದಿನ ತಂಡ : ಶಿಖರ್ ಧವನ್(ಕ್ಯಾಪ್ಟನ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್(ವಿ.ಕೀ), ರವೀಂದ್ರ ಜಡೇಜಾ(ಉಪನಾಯಕ), ಶಾರ್ದೂಲ್ ಠಾಕೂರ್. ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್