ದುಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿರುವ ಟೀಂ ಇಂಡಿಯಾ ಐಸಿಸಿ ಏಕದಿನ ರ್‍ಯಾಂಕಿಂಗ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಮುಂದುವರೆದಿದೆ. ಹಿರಿಯ ಆಟಗಾರರ ಅನುಪಸ್ಥಿತಿ ಮಧ್ಯೆ ಅದ್ಭುತ ಪ್ರದರ್ಶನ ನೀಡಿರುವ ಯಂಗ್ ಇಂಡಿಯಾ ಮೂರು ಪಂದ್ಯಗಳಲ್ಲಿ ಸಂಘಟಿತ ಹೋರಾಟದ ಬಲದಿಂದ 3-0 ಅಂತರದ ಜಯ ಸಾಧಿಸಿದೆ. ಈ ಮೂಲಕ 110 ಪಾಯಿಂಟ್ಗಳಿಕೆ ಮಾಡಿದೆ.
ಪಾಕಿಸ್ತಾನ 106 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಉಳಿದಂತೆ 128 ಅಂಕಗಳಿಕೆ ಮಾಡಿರುವ ನ್ಯೂಜಿಲ್ಯಾಂಡ್ ಅಗ್ರ ಸ್ಥಾನ ಕಾಯ್ದುಕೊಂಡಿದ್ದು, ಇಂಗ್ಲೆಂಡ್ 119 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಇದನ್ನೂಓದಿರಿ: ಇತಿಹಾಸ ಸೃಷ್ಟಿಸಿದ ಸೂರಜ್: ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಚಿನ್ನ ಗೆದ್ದ 16ರ ಪೋರ
ಈ ಹಿಂದೆ ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ಲಗ್ಗೆ ಹಾಕಿತ್ತು. ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡುವ ಮೂಲಕ 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ.
ನಿನ್ನೆ ರಿಲೀಸ್ ಆಗಿದ್ದ ಪ್ಲೇಯರ್ಸ್ಗಳ ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಒಂದೊಂದು ಸ್ಥಾನ ಕುಸಿತ ಕಂಡಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಿಖರ್ ಧವನ್ 13ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.