ಟೆಸ್ಟ್‌ನಲ್ಲಿ ಉತ್ತಮ ಬ್ಯಾಟಿಂಗ್ ಲಯದಲ್ಲಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಓವೆಲ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಮೇಲೆ ಸವಾರಿ ಮಾಡಿದ್ರು. ಆ ಮೂಲಕ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರೆ ಇದೊಂದೇ ಅಲ್ಲ. ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಸೆಂಚುರಿ ಬಾರಿಸಿದ ಯಾವುದೇ ಪಂದ್ಯವನ್ನು ಟೀಂ ಇಂಡಿಯಾ ಸೋತೇ ಇಲ್ಲ. ಈವರೆಗೆ ಶರ್ಮಾ 8 ಶತಕಗಳನ್ನು ಸಿಡಿಸಿದ್ದು, ಆ ಎಲ್ಲಾ ಪಂದ್ಯಗಳನ್ನು ಭಾರತ ಗೆದ್ದುಕೊಂಡಿದೆ.
ರೋಹಿತ್ ಶರ್ಮಾ ಶತಕಗಳ ಮಾಹಿತಿ..
177 - ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು
111 * - ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು
102 * - ಶ್ರೀಲಂಕಾ ವಿರುದ್ಧ ಭಾರತ ಗೆಲುವು
176 - ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
127 - ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಗೆಲುವು
212 - ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಗೆಲುವು
161 - ಇಂಗ್ಲೆಂಡ್ ವಿರುದ್ಧ ಗೆಲುವು
127 - ಇಂಗ್ಲೆಂಡ್ ವಿರುದ್ಧ ಭಾರತ ಗೆಲುವು
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ 157 ರನ್ ಗಳ ಜಯ ಸಾಧಿಸಿದೆ. ಗೆಲುವಿನ ಕೊನೆಯ ದಿನದಂದು ಆತಿಥೇಯ ತಂಡಕ್ಕೆ 291 ರನ್ ಗಳ ಅಗತ್ಯವಿತ್ತು. ಭಾರತದ ಬೌಲರ್ ಗಳು ಆಂಗ್ಲನ್ನರನ್ನು 210 ರನ್ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದರು.
ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗೆ ಆಲೌಟ್ ಆಗಿತ್ತು.ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 290 ರನ್ ಗಳಿಸಿತು. ರೋಹಿತ್ ಶರ್ಮಾ ಶತಕದ ನೆರವಿನಿಂದ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 466 ರನ್ ಗಳಿಸಿ ಎದುರಾಳಿಗಳಿಗೆ 368 ರನ್ ಗಳ ಬೃಹತ್ ಗುರಿಯನ್ನು ನೀಡಿತ್ತು.