ಮುಂಬೈ: ಆಗಸ್ಟ್ 27ರಿಂದ ಆರಂಭಗೊಳ್ಳಲಿರುವ ಏಷ್ಯನ್ ರಾಷ್ಟ್ರಗಳ ಟಿ20 ಕ್ರಿಕೆಟ್ ಕದನ ಏಷ್ಯಾಕಪ್ಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ಕನ್ನಡಿಗ ಕೆ.ಎಲ್.ರಾಹುಲ್ ಮಹತ್ವದ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗಾಯಗೊಂಡಿರುವ ಕಾರಣ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ಗೆ ಅವಕಾಶ ನೀಡಿಲ್ಲ.
-
🚨#TeamIndia squad for Asia Cup 2022 - Rohit Sharma (Capt ), KL Rahul (VC), Virat Kohli, Suryakumar Yadav, Deepak Hooda, R Pant (wk), Dinesh Karthik (wk), Hardik Pandya, R Jadeja, R Ashwin, Y Chahal, R Bishnoi, Bhuvneshwar Kumar, Arshdeep Singh, Avesh Khan.
— BCCI (@BCCI) August 8, 2022 " class="align-text-top noRightClick twitterSection" data="
">🚨#TeamIndia squad for Asia Cup 2022 - Rohit Sharma (Capt ), KL Rahul (VC), Virat Kohli, Suryakumar Yadav, Deepak Hooda, R Pant (wk), Dinesh Karthik (wk), Hardik Pandya, R Jadeja, R Ashwin, Y Chahal, R Bishnoi, Bhuvneshwar Kumar, Arshdeep Singh, Avesh Khan.
— BCCI (@BCCI) August 8, 2022🚨#TeamIndia squad for Asia Cup 2022 - Rohit Sharma (Capt ), KL Rahul (VC), Virat Kohli, Suryakumar Yadav, Deepak Hooda, R Pant (wk), Dinesh Karthik (wk), Hardik Pandya, R Jadeja, R Ashwin, Y Chahal, R Bishnoi, Bhuvneshwar Kumar, Arshdeep Singh, Avesh Khan.
— BCCI (@BCCI) August 8, 2022
ಟೀಂ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ(ಕ್ಯಾಪ್ಟನ್), ಕೆ.ಎಲ್.ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್(ವಿ.ಕೀ), ದಿನೇಶ್ ಕಾರ್ತಿಕ್(ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್.ಯಜುವೇಂದ್ರ ಚಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ ಹಾಗು ಅರ್ಷದೀಪ್ ಸಿಂಗ್, ಆವೇಶ್ ಖಾನ್
ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ದೀಪಕ್ ಚಹರ್
ದೀರ್ಘ ವಿಶ್ರಾಂತಿ ಬಳಿಕ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕೆ.ಎಲ್.ರಾಹುಲ್ಗೂ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಏಷ್ಯಾಕಪ್ನಲ್ಲಿ ಇಬ್ಬರು ವಿಕೆಟ್ ಕೀಪರ್ಗಳಿಗೆ ಅವಕಾಶ ದೊರೆತಿದೆ. ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಈ ಜವಾಬ್ದಾರಿ ನಿರ್ವಹಿಸಲಿರುವರು. ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್, ಚಹಲ್, ರವಿ ಬಿಷ್ಣೋಯ್ ಸ್ಪಿನ್ ಸ್ಪೆಷಲಿಸ್ಟ್ಗಳಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಲ್ರೌಂಡ್ ವಿಭಾಗದ ಹೊಣೆಗಾರರು.
ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಆಧಾರಸ್ತಂಭವಾಗಿದ್ದಾರೆ. ಬುಮ್ರಾ ಅನುಪಸ್ಥಿತಿಯಲ್ಲಿ ವೇಗದ ಬೌಲಿಂಗ್ ವಿಭಾಗದ ಜವಾಬ್ದಾರಿ ಭುವನೇಶ್ವರ್ ಕುಮಾರ್ ಮೇಲಿದ್ದು, ಅವರಿಗೆ ಯುವ ಆಟಗಾರರಾದ ಆವೇಶ್ ಖಾನ್, ಅರ್ಷದೀಪ್ ಸಿಂಗ್ ಸಾಥ್ ನೀಡಲಿದ್ದಾರೆ. ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಕೂಡ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಮತ್ತು ದೀಪಕ್ ಚಹರ್ ಮೀಸಲು ಆಟಗಾರರಾಗಿದ್ದಾರೆ.
ಆಗಸ್ಟ್ 28 ರಂದು ನಡೆಯಲಿರುವ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಗ್ರೂಪ್ ಎ ವಿಭಾಗದಲ್ಲಿ ಉಭಯ ತಂಡಗಳು ದುಬೈ ಮೈದಾನದಲ್ಲಿ ಸೆಣಸಾಟ ನಡೆಸಲಿವೆ. ಈ ಟೂರ್ನಿಯಲ್ಲಿ ಭಾರತ ಅತಿ ಹೆಚ್ಚು ಸಲ ಏಷ್ಯಾ ಕಪ್ ಗೆದ್ದಿರುವ ದಾಖಲೆ ಹೊಂದಿದೆ. ಭಾರತ 6 ಬಾರಿ ಏಷ್ಯಾ ಕಪ್ ಗೆದ್ದಿದೆ. ಕಳೆದ ಬಾರಿ ಬಾಂಗ್ಲಾದೇಶ ಮಣಿಸಿ ಭಾರತ ಪ್ರಶಸ್ತಿ ಗೆದ್ದಿತ್ತು.
ಏಷ್ಯಾಕಪ್ ಸಂಪೂರ್ಣ ವೇಳಾಪಟ್ಟಿ ಇಂತಿದೆ:
- ಆಗಸ್ಟ್ 27: ಶ್ರೀಲಂಕಾ ವರ್ಸಸ್ ಅಫ್ಘಾನಿಸ್ತಾನ
- ಆಗಸ್ಟ್ 28: ಭಾರತ ವರ್ಸಸ್ ಪಾಕಿಸ್ತಾನ
- ಆಗಸ್ಟ್ 30: ಬಾಂಗ್ಲಾದೇಶ ವರ್ಸಸ್ ಅಫ್ಘಾನಿಸ್ತಾನ
- ಆಗಸ್ಟ್ 31: ಭಾರತ ವರ್ಸಸ್ ಕ್ವಾಲಿಫೈಯರ್
- ಸೆಪ್ಟೆಂಬರ್1: ಶ್ರೀಲಂಕಾ ವರ್ಸಸ್ ಬಾಂಗ್ಲಾದೇಶ
- ಸೆಪ್ಟೆಂಬರ್ 2: ಪಾಕಿಸ್ತಾನ ವರ್ಸಸ್ ಕ್ವಾಲಿಫೈಯರ್
- ಸೆಪ್ಟೆಂಬರ್ 3 – B1 vs B2 – ಶಾರ್ಜಾ
- ಸೆಪ್ಟೆಂಬರ್ 4 A1 vs A2 – ದುಬೈ
- ಸೆಪ್ಟೆಂಬರ್ 6 A1 vs B1 – ದುಬೈ
- ಸೆಪ್ಟೆಂಬರ್ 7 A2 vs B2 – ದುಬೈ
- ಸೆಪ್ಟೆಂಬರ್ 8 A1 vs B2 – ದುಬೈ
- ಸೆಪ್ಟೆಂಬರ್ 9 B1 vs- A2 ದುಬೈ
- ಸೆಪ್ಟೆಂಬರ್ 11- ಫೈನಲ್ ಪಂದ್ಯ, ದುಬೈ
ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ.
ಇದನ್ನೂ ಓದಿರಿ: ಏಷ್ಯಾ ಕಪ್ ವೇಳಾಪಟ್ಟಿ ಪ್ರಕಟ: ಆಗಸ್ಟ್ 28ರಂದು ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯ