ನವದೆಹಲಿ: ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ20 ವಿಶ್ವಕಪ್ ಮತ್ತು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಗಾಯಗೊಂಡಿದ್ದ ಜಸ್ಪ್ರೀತ್ ಬೂಮ್ರಾ ಮತ್ತು ಹರ್ಷಲ್ ಪಟೇಲ್ ತಂಡಕ್ಕೆ ವಾಪಸ್ ಆಗಿದ್ದಾರೆ. ಗಾಯಗೊಂಡು ಸರ್ಜರಿಗೆ ಒಳಗಾಗಿರುವ ಆಲ್ರೌಂಡರ್ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ.
ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ಸಮರ ನಡೆಯಲಿದ್ದು, ರೋಹಿತ್ ಶರ್ಮಾ ನೇತೃತ್ವದ 15 ಸದಸ್ಯರ ಬಲಿಷ್ಠ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಗಾಯದ ಸಮಸ್ಯೆಗೀಡಾಗಿ ಚೇತರಿಸಿಕೊಂಡಿರುವ ವೇಗಿಗಳಾದ ಜಸ್ಪ್ರೀತ್ ಬೂಮ್ರಾ, ಹರ್ಷಲ್ ಪಟೇಲ್ರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
-
One title 🏆
— BCCI (@BCCI) September 12, 2022 " class="align-text-top noRightClick twitterSection" data="
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQ
">One title 🏆
— BCCI (@BCCI) September 12, 2022
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQOne title 🏆
— BCCI (@BCCI) September 12, 2022
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQ
ಅರ್ಷದೀಪ್ ಇನ್, ಆವೇಶ್ಖಾನ್ ಔಟ್: ಏಷ್ಯಾಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಕ್ಯಾಚ್ ಬಿಟ್ಟು ಟೀಕೆಗೆ ಗುರಿಯಾಗಿದ್ದ ಯುವ ವೇಗಿ ಅರ್ಷದೀಪ್ ಸಿಂಗ್ಗೆ ಅವಕಾಶ ನೀಡಲಾಗಿದೆ. ಇನ್ನೊಬ್ಬ ವೇಗಿ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಅನುಭವಿ ವೇಗಿ ಮಹಮದ್ ಶಮಿಗೆ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ನೀಡದ್ದಕ್ಕೆ ಟೀಕೆ ವ್ಯಕ್ತವಾಗಿತ್ತು.
ಅಚ್ಚರಿ ಎಂಬಂತೆ ವಿಶ್ವಕಪ್ ತಂಡದಲ್ಲೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಮೀಸಲು ಆಟಗಾರರಲ್ಲಿ ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ದೀಪಕ್ ಚಹರ್ ಜೊತೆಗೆ ಶಮಿಗೆ ಸ್ಥಾನ ನೀಡಲಾಗಿದೆ.
-
One title 🏆
— BCCI (@BCCI) September 12, 2022 " class="align-text-top noRightClick twitterSection" data="
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQ
">One title 🏆
— BCCI (@BCCI) September 12, 2022
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQOne title 🏆
— BCCI (@BCCI) September 12, 2022
One goal 🎯
Our squad 💪🏻#TeamIndia | #T20WorldCup pic.twitter.com/Dw9fWinHYQ
ರವೀಂದ್ರ ಜಡೇಜಾಗಿಲ್ಲ ಚಾನ್ಸ್: ಏಷ್ಯಾ ಕಪ್ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದ ಆಲ್ರೌಂಡರ್ ರವೀಂದ್ರ ಜಡೇಜಾಗೆ ಟಿ20 ವಿಶ್ವಕಪ್ ತಂಡಕ್ಕೆ ಪರಿಗಣಿಸಲಾಗಿಲ್ಲ. ಸರ್ಜರಿಗೆ ಒಳಗಾಗಿರುವ ಜಡೇಜಾ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ವಿಶ್ವಕಪ್ಗೆ ಇನ್ನೂ ಕೇವಲ 5 ವಾರಗಳು ಬಾಕಿ ಇರುವ ಕಾರಣ ಜಡೇಜಾ ಲಭ್ಯತೆ ಅನುಮಾನದ ಕಾರಣ ಅವರ ಬದಲಾಗಿ ಅಕ್ಸರ್ ಪಟೇಲ್ಗೆ ಆಲ್ರೌಂಡರ್ ಆಗಿ ಅವಕಾಶ ನೀಡಲಾಗಿದೆ.
ಗಾಯದಿಂದ ಚೇತರಿಸಿಕೊಂಡಿರುವ ಜಸ್ಪ್ರೀತ್ ಬೂಮ್ರಾ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಟಿ20 ವಿಶ್ವಕಪ್ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಮಹಮದ್ ಶಮಿಗೆ ಆಸ್ಟ್ರೇಲಿಯಾ, ಆಫ್ರಿಕಾ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಟಿ20 ವಿಶ್ವಕಪ್ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯಾ, ಆರ್.ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು - ಮಹಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.
ಆಸ್ಟ್ರೇಲಿಯಾ ಸರಣಿಗೆ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯಾ, ಆರ್. ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಮಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬೂಮ್ರಾ.
ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯಜುವೇಂದ್ರ ಚಹಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ.
ಇದನ್ನು ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಶಿಖರ್ ಧವನ್ ಕ್ಯಾಪ್ಟನ್: ಬಿಸಿಸಿಐ