ETV Bharat / sports

IND vs WI: ವೆಸ್ಟ್ ಇಂಡೀಸ್ ದಿಗ್ಗಜ ಸರ್ ಗಾರ್ಫೀಲ್ಡ್ ಸೋಬರ್ಸ್ ಭೇಟಿ ಮಾಡಿದ ಟೀಮ್​ ಇಂಡಿಯಾ..

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯು ಜುಲೈ 12 ರಿಂದ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾ ಬಾರ್ಬಡೋಸ್‌ನಲ್ಲಿ ಅಭ್ಯಾಸ ಪಂದ್ಯ ಆಡುತ್ತಿದೆ. ಈ ವೇಳೆ ಟೀಂ ಇಂಡಿಯಾ ವೆಸ್ಟ್ ಇಂಡೀಸ್‌ನ ದಿಗ್ಗಜ ಆಟಗಾರನನ್ನು ಭೇಟಿ ಮಾಡಿದೆ.

india team rohit sharma virat kohli shubman gill rahul dravid meet sir garfield sobers in barbados
Etv Bharatಸರ್ ಗಾರ್ಫೀಲ್ಡ್ ಸೋಬರ್ಸ್
author img

By

Published : Jul 5, 2023, 7:35 PM IST

ಬಾರ್ಬಡೋಸ್: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ, ಪ್ರಸ್ತುತ ಬಾರ್ಬಡೋಸ್‌ನಲ್ಲಿ ಅಭ್ಯಾಸ ನಡೆಸುತ್ತಿರುವ ಭಾರತ ತಂಡ ಲೆಜೆಂಡರಿ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಅವರನ್ನು ಭೇಟಿ ಮಾಡಿದೆ. ಕೆನ್ಸಿಂಗ್ಟನ್ ಓವಲ್‌ನಲ್ಲಿ 86 ವರ್ಷದ ವೆಸ್ಟ್ ಇಂಡೀಸ್ ದಂತಕಥೆ ಮತ್ತು ಅವರ ಪತ್ನಿಯನ್ನು ಭಾರತೀಯ ಆಟಗಾರರು ಭೇಟಿಯಾದ ವಿಡಿಯೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

ಭಾರತದ ಬ್ಯಾಟರ್ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ಅಜಿಂಕ್ಯ ರಹಾನೆ, ರವಿಚಂದ್ರನ್ ಅಶ್ವಿನ್ ಮತ್ತು ಮುಖ್ಯ ಕೋಚ್ ರಾಹುಲ್ ಡೇವಿಡ್ ಅವರು ಸಾರ್ವಕಾಲಿಕ ಶ್ರೇಷ್ಠರೊಂದಿಗೆ ನಗುತ್ತಾ ಮತ್ತು ಚರ್ಚಿಸುತ್ತಿರುವುದನ್ನು ಕಾಣಬಹುದು. 2022 ರಲ್ಲಿ, ವಿರಾಟ್ ಕೊಹ್ಲಿಗೆ ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಯನ್ನು ನೀಡಲಾಯಿತು ಮತ್ತು ಅಶ್ವಿನ್ ಅವರು ಐಸಿಸಿ ವರ್ಷದ ಕ್ರಿಕೆಟಿಗ ಮತ್ತು 2017 ರಲ್ಲಿ ವರ್ಷದ ಐಸಿಸಿ ಟೆಸ್ಟ್ ಕ್ರಿಕೆಟಿಗ ಎಂದು ಹೆಸರಿಸಲ್ಪಟ್ಟ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿಯನ್ನು ಪಡೆದರು.

ವೆಸ್ಟ್ ಇಂಡಿಯಾದ ಮಾಜಿ ನಾಯಕ ಸರ್ ಗಾರ್ಫೀಲ್ಡ್ ಸೋಬರ್ಸ್ 93 ಪಂದ್ಯಗಳಲ್ಲಿ 57.78 ಸರಾಸರಿಯೊಂದಿಗೆ 8032 ರನ್ ಗಳಿಸಿದ್ದಾರೆ. ಅವರು ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 26 ಶತಕಗಳು ಮತ್ತು 30 ಅರ್ಧಶತಕಗಳನ್ನು ಗಳಿಸಿದ್ದಾರೆ.

ಒಂದು ತಿಂಗಳ ಕಾಲ ಸರಣಿಯಲ್ಲಿ ಒಟ್ಟು 10 ಪಂದ್ಯಗಳು ನಡೆಯಲಿವೆ. ಭಾರತವು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಪ್ರಾರಂಭವಾಗಲಿದೆ. ಅದರಲ್ಲಿ ಮೊದಲನೇ ಪಂದ್ಯ ಜುಲೈ 12 ರಿಂದ 16 ರವರೆಗೆ ಡೊಮಿನಿಕಾದ ವಿಂಡ್ಸರ್ ಪಾರ್ಕ್ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಜೂನ್ 20 ರಿಂದ ಜೂನ್ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿದೆ.

ಟೆಸ್ಟ್ ಸರಣಿಯ ನಂತರ, ಭಾರತವು ವೆಸ್ಟ್ ಇಂಡೀಸ್‌ನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಇದು ಅಭ್ಯಾಸ ಪಂದ್ಯದ ರೀತಿ ಭಾರತಕ್ಕೆ ಆಗಲಿದೆ. ವಿಶ್ವಕಪ್​ನ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್​ ಇಂಡೀಸ್​ ತಂಡದ ಜೊತೆ ಭಾರತ ಅವರ ನೆಲದಲ್ಲಿ ಯಾವ ರೀತಿ ಆಡಲಿದೆ ಎಂಬುದು ಗಮನಾರ್ಹ ಅಂಶವಾಗಿರಲಿದೆ. ಮೊದಲ ಹಾಗೂ ಎರಡನೇ ಏಕದಿನ ಪಂದ್ಯ ಜುಲೈ 27 ಮತ್ತು 29 ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂತಿಮ ಪಂದ್ಯವು ಆಗಸ್ಟ್ 1 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿದೆ.

ಏಕದಿನ ಸರಣಿಯ ನಂತರ, ಉಭಯ ತಂಡಗಳು ಐದು ಪಂದ್ಯಗಳ ಟಿ20 ಪಂದ್ಯಗಳನ್ನು ಆಡಲಿವೆ. ಟಿ 20 ಅಗಸ್ಟ್​​ 3, 6, 8, 12 ಮತ್ತು 13 ರಂದು ನಡೆಯಲಿದೆ. ಬಿಸಿಸಿಯ ಟೆಸ್ಟ್​ ಮತ್ತು ಏಕದಿನ ಪಂದ್ಯಕ್ಕೆ ಮಾತ್ರ ತಂಡವನ್ನು ಪ್ರಕಟಿಸಿದೆ. ಟಿ20ಗೆ ಈ ತಿಂಗಳ ಅಂತ್ಯದಲ್ಲಿ ತಂಡ ಪ್ರಕಟಿಸುವ ಸಾಧ್ಯತೆ ಇದೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಇದನ್ನೂ ಓದಿ: Duleep Trophy semifinal: ವೆಸ್ಟ್​​ ಝೋನ್​ನಲ್ಲಿ ಪೂಜಾರ, ಸರ್ಫರಾಜ್​, ಸೂರ್ಯ ವೈಫಲ್ಯ.. ನಾರ್ಥ್​ ಝೋನ್​ಗೆ ಪ್ರಭಾಸಿಮ್ರಾನ್​ ಏಕಾಂಗಿ ಆಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.