ನವದೆಹಲಿ: ಬರೋಬ್ಬರಿ ಆರು ವರ್ಷಗಳ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಉಭಯ ತಂಡಗಳ ನಡುವೆ ಆಗಸ್ಟ್ ತಿಂಗಳಲ್ಲಿ ಮೂರು ಏಕದಿನ ಪಂದ್ಯಗಳ ಸರಣಿ ಆಯೋಜನೆಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಜಿಂಬಾಬ್ವೆ ಕ್ರಿಕೆಟ್ ಬೋರ್ಡ್ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಈ ಸರಣಿಗೋಸ್ಕರ ಟೀಂ ಇಂಡಿಯಾ ಹೊಸ ಹೊಸ ಪ್ರತಿಭೆಗಳಿಗೆ ಚಾನ್ಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
-
Zimbabwe to host Bangladesh and India before touring Australia
— Zimbabwe Cricket (@ZimCricketv) July 19, 2022 " class="align-text-top noRightClick twitterSection" data="
Details 👇https://t.co/yJyGakMm9q
">Zimbabwe to host Bangladesh and India before touring Australia
— Zimbabwe Cricket (@ZimCricketv) July 19, 2022
Details 👇https://t.co/yJyGakMm9qZimbabwe to host Bangladesh and India before touring Australia
— Zimbabwe Cricket (@ZimCricketv) July 19, 2022
Details 👇https://t.co/yJyGakMm9q
ಐಸಿಸಿ ಸೂಪರ್ ಲೀಗ್ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿದ್ದು, ಲಭ್ಯವಾಗಿರುವ ಮಾಹಿತಿ ಪ್ರಕಾರ ಕನ್ನಡಿಗ ಕೆಎಲ್ ರಾಹುಲ್ ತಂಡ ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್ 18,20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ. ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಐಸಿಸಿ ಲೀಗ್ ಶ್ರೇಯಾಂಕದಲ್ಲಿ ಜಿಂಬಾಬ್ವೆ ಪ್ರಸ್ತುತ 12ನೇ ಸ್ಥಾನದಲ್ಲಿದೆ.
ಈ ಹಿಂದೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಕೊನೆಯದಾಗಿ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. 2016ರ ಜೂನ್-ಜುಲೈ ತಿಂಗಳಲ್ಲಿ ಮೂರು ಏಕದಿನ ಹಾಗೂ ಟಿ20 ಪಂದ್ಯಗಳು ನಡೆದಿದ್ದವು. ಇದೀಗ ಟೀಂ ಇಂಡಿಯಾ ಮತ್ತೊಮ್ಮೆ ಜಿಂಬಾಬ್ವೆ ಪ್ರವಾಸ ಹಮ್ಮಿಕೊಳ್ಳಲಿದೆ. ಸದ್ಯ ಟೀಂ ಇಂಡಿಯಾ ಜುಲೈ 22ರಿಂದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಭಾಗಿಯಾಗಲಿದ್ದು, ಇದಾದ ಬಳಿಕ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯಲಿದೆ.
ಇದನ್ನೂ ಓದಿರಿ: ದಕ್ಷಿಣ ಆಫ್ರಿಕಾ ಚೊಚ್ಚಲ ಟಿ -20 ಲೀಗ್... ಎಲ್ಲ ಆರು ತಂಡ ಖರೀದಿ ಮಾಡಿದ ಐಪಿಎಲ್ ಫ್ರಾಂಚೈಸಿ!
ಭಾರತ ವಿರುದ್ಧದ ಸರಣಿ ನಂತರ ಜಿಂಬಾಬ್ವೆ ಬಾಂಗ್ಲಾದೇಶದೊಂದಿಗೆ ಕಣಕ್ಕಿಳಿಯಲಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ.