ಮೆಲ್ಬರ್ನ್: ಭಾರತದ ವಿರುದ್ಧದ ಎರಡನೇ ಟೆಸ್ಟ್ (ಬಾಕ್ಸಿಂಗ್ ಡೇ ಟೆಸ್ಟ್)ಗೆ ಯಾವುದೇ ಬದಲಾವಣೆ ಮಾಡದ ಹಿಂದಿನ ತಂಡವನ್ನೇ ಕಣಕ್ಕಿಳಿಸಲು ಕ್ರಿಕೆಟ್ ಆಸ್ಟ್ರೇಲಿಯಾ ನಿರ್ಧರಿಸಿದೆ. ಈ ಬಗ್ಗೆ ಕೋಚ್ ಜಸ್ಟಿನ್ ಲ್ಯಾಂಗರ್ ತಿಳಿಸಿದ್ದಾರೆ.
ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಬೌಲರ್‌ಗಳು ಭಾರತದ ಬ್ಯಾಟ್ಸ್‌ಮನ್‌ಗಳನ್ನು ಅತ್ಯಂತ ಕಡಿಮೆ ಅಂದರೆ ಕೇವಲ 36 ರನ್ನುಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ಸು ಕಂಡಿದ್ದರು. ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹ್ಯಾಜಲ್‌ವುಡ್ ಮೊದಲ ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ ಒಟ್ಟು 9 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಇಬ್ಬರು ಬೌಲರ್‌ಗಳ ಮಾರಕ ದಾಳಿಗೆ ಭಾರತೀಯ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಪರೇಡ್ ನಡೆಸಿದ್ದರು.
ತಮ್ಮ ತಂಡದ ಸಾಧನೆ ಉತ್ತಮವಾಗಿರುವ ಕಾರಣಕ್ಕೆ ಆಸ್ಟ್ರೇಲಿಯಾ ತಂಡ ಮೊದಲ ಟೆಸ್ಟ್ ಪಂದ್ಯಕ್ಕೆ ಕಣಕ್ಕಿಳಿಸಿದ ತಂಡವನ್ನೇ ಬದಲಾವಣೆ ಮಾಡದೇ ಅಂಗಣಕ್ಕಿಳಿಸಲು ತೀರ್ಮಾನಿಸಿದೆ.
ಓದಿ: ಭಾರತ ಕ್ರಿಕೆಟ್ ತಂಡದಲ್ಲಿ ತಾರತಮ್ಯ: ಕೊಹ್ಲಿ - ನಟರಾಜನ್ ಉಲ್ಲೇಖಿಸಿ ಗವಾಸ್ಕರ್ ಶಾಕಿಂಗ್ ಹೇಳಿಕೆ
ಇನ್ನು, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಪ್ರತಿದಿನದ ವೀಕ್ಷಕರ ಸಂಖ್ಯೆ 30 ಸಾವಿರಕ್ಕೆ ಏರಿಕೆ ಆಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ. ಇದಕ್ಕೂ ಮುನ್ನ ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ವೀಕ್ಷಕರ ಸಂಖ್ಯೆಯನ್ನು 25 ಸಾವಿರಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿತ್ತು.
ಕೊರೊನಾ ವೈರಸ್ ಮಧ್ಯೆಯೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಬಾಕ್ಸಿಂಗ್ ಡೇ ಟೆಸ್ಟ್ ನಡೆಯುತ್ತಿರುವುದಕ್ಕೆ ಜಸ್ಟಿನ್ ಲ್ಯಾಂಗರ್ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಎರಡನೇ ಮತ್ತು ಮಹತ್ವದ ಈ ಪಂದ್ಯಕ್ಕೆ ಡೇವಿಡ್ ವಾರ್ನರ್ ಮತ್ತು ವೇಗಿ ಸೀನ್ ಅಬ್ಬಾಟ್ ಲಭ್ಯವಿರುವುದಿಲ್ಲ.
ಆಸ್ಟ್ರೇಲಿಯಾ ಪ್ಲೇಯಿಂಗ್ 11 ಹೀಗಿದೆ:
ಜೋ ಬರ್ನ್ಸ್, ಮ್ಯಾಥ್ಯೂ ವೇಡ್, ಮಾರ್ನಸ್ ಲಾಬುಶಾನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೂನ್ ಗ್ರೀನ್, ಟಿಮ್ ಪೈನ್(ಕ್ಯಾಪ್ಟನ್), ಪ್ಯಾಟ್ ಕಮ್ಮಿನ್ಸ್, ಮಿಶೆಲ್ ಸ್ಟಾರ್ಕ್, ನಾಥನ್ ಲಯಾನ್ ಹಾಗು ಜೋಶ್ ಹ್ಯಾಜಲ್ ವುಡ್.