ಅಡಿಲೇಡ್: ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಅಹರ್ನಿಶಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಪೃಥ್ವಿ ಶಾ ವೈಫಲ್ಯ ಅನುಭವಿಸಿದ್ದಾರೆ.
ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಪೃಥ್ವಿ ಶಾ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 4 ರನ್ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಎರಡು ಇನ್ನಿಂಗ್ಸ್ನಲ್ಲಿಯೂ ಕ್ಲೀನ್ ಬೌಲ್ಡ್ ಆಗುವ ಮೂಲಕ ಅವರು ಕ್ರಿಕೆಟ್ ಪ್ರೇಮಿಗಳು ಮತ್ತು ಆಯ್ಕೆಗಾರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
-
Castled! Of course Pat Cummins delivered the goods at the close of play again! @hcltech | #AUSvIND pic.twitter.com/v0maFHBg2r
— cricket.com.au (@cricketcomau) December 18, 2020 " class="align-text-top noRightClick twitterSection" data="
">Castled! Of course Pat Cummins delivered the goods at the close of play again! @hcltech | #AUSvIND pic.twitter.com/v0maFHBg2r
— cricket.com.au (@cricketcomau) December 18, 2020Castled! Of course Pat Cummins delivered the goods at the close of play again! @hcltech | #AUSvIND pic.twitter.com/v0maFHBg2r
— cricket.com.au (@cricketcomau) December 18, 2020
ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದು, ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿರುವ ಶಾ ಭರವಸೆಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು. ನಂತರ ಭಾರತ ತಂಡ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಾಗ ಇವರು ತಮ್ಮ ಕೊನೆಯ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ್ದರು. ಆ ಬಳಿಕ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗೂಳಿದಿದ್ದರು. ಈಗ ಮತ್ತೆ ತಂಡಕ್ಕೆ ಆಯ್ಕೆಯಾಗಿ ಪ್ಲೇಯಿಂಗ್-11ಲ್ಲಿ ಸ್ಥಾನ ಪಡೆದರು. ಆದರೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ.
ಓದಿ: ಪಿಂಕ್ ಬಾಲ್ ಎದುರಿಸುವುದು ಅಷ್ಟು ಸುಲಭವಲ್ಲ: ಕಳಪೆ ಪ್ರದರ್ಶನ ಒಪ್ಪಿಕೊಂಡ ಪೈನ್
ಇದಲ್ಲದೇ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಫೀಲ್ಡಿಂಗ್ನಲ್ಲೂ ಅವರು ಕಳಪೆ ಪ್ರದರ್ಶನ ತೋರುತ್ತಿದ್ದಾರೆ. ಪಂದ್ಯದ ವೇಳೆ ಸುಲಭ ಕ್ಯಾಚ್ ಕೈ ಚೆಲ್ಲುವ ಮೂಲಕ ನೆಟ್ಟಿಗರಿಂದ ಟ್ರೋಲ್ ಆಗುತ್ತಿದ್ದಾರೆ. ಟೆಸ್ಟ್ ಆರಂಭಕ್ಕೂ ಮುನ್ನ ಕೆ.ಎಲ್.ರಾಹುಲ್ ಮತ್ತು ಶುಭಮನ್ ಗಿಲ್ ಬಿಟ್ಟು ಪೃಥ್ವಿ ಶಾ ಅವರನ್ನು ಆಯ್ಕೆ ಮಾಡಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಹಲವು ಮಾಜಿ ಆಟಗಾರರು ಪೃಥ್ವಿ ಶಾ ಆಟದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಅವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವುದು ಕಷ್ಟ ಎಂದಿದ್ದಾರೆ.