ETV Bharat / sports

ಭಾರತ vs ಆಸ್ಟ್ರೇಲಿಯಾ ಟಿ20: ಮೊದಲ ಪಂದ್ಯದ ಸಮಯ, ಪಿಚ್, ಹವಾಮಾನ ವರದಿ - t20 series 1st match

India vs Australia t20 series 1st match: ಮ್ಯಾಥ್ಯೂ ವೇಡ್ ಮತ್ತು ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಕ್ರಮವಾಗಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವೆ ಇಂದು ಮೊದಲ ಟಿ20 ಪಂದ್ಯ ನಡೆಯಲಿದೆ.

india vs australia t 20 series 1st match preview , pitch report, weather, prediction

author img

By ETV Bharat Karnataka Team

Published : Nov 23, 2023, 2:25 PM IST

Updated : Nov 23, 2023, 2:42 PM IST

ವಿಶಾಖಪಟ್ಟಣಂ: 2023ರ ವಿಶ್ವಕಪ್ ಮುಕ್ತಾಯದ ಕೆಲವೇ ದಿನಗಳ ಅಂತರದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಐದು ಪಂದ್ಯಗಳ ಟಿ20 ಸರಣಿಗೆ ಮುಂದಾಗಿವೆ. ಇಂದು (ಗುರುವಾರ) ಉಭಯ ತಂಡಗಳ ಮೊದಲ ಟಿ20 ಪಂದ್ಯ ನಡೆಯುತ್ತಿದ್ದು, ವಿಶಾಖಪಟ್ಟಣದ ಡಾ.ವೈ.ಎಸ್.ರಾಜಶೇಖರ್ ರೆಡ್ಡಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿಕೊಂಡಿದೆ. ಅಹಮದಾಬಾದ್​ನ ಮೋದಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳ ಸೋಲಿನ ಬಳಿಕ ಭಾರತ ತನ್ನ ಮೊದಲ ಟಿ20 ಪಂದ್ಯವನ್ನು ಆಡುತ್ತಿದೆ. ಕೇವಲ ನಾಲ್ಕು ದಿನಗಳ ಅಂತರದಲ್ಲಿ ಉಭಯ ತಂಡಗಳು ಮತ್ತೆ ಚುಟುಕು ಮಾದರಿಯಲ್ಲಿ ಕದನಕ್ಕಿಳಿದಿರುವುದು ಕುತೂಹಲ ಮೂಡಿಸಿದೆ.

ಟೀಂ ಇಂಡಿಯಾದ ಕೆಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಟ್ರೇಲಿಯಾ ತಂಡ ಕೂಡ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿದ್ದು ಮ್ಯಾಥ್ಯೂ ವೇಡ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಭಾರತ ವಿಶ್ವಕಪ್‌ ಫೈನಲ್‌ ಪಂದ್ಯದ ಸೋಲಿನ ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ಗೆದ್ದ ಆಸೀಸ್​ ಪೈಪೋಟಿ ನೀಡುವ ಉತ್ಸಾಹದಲ್ಲಿದೆ. ಸಂಜೆ 7:00 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಉಭಯ ತಂಡಗಳ ನಡುವೆ ಇದುವರೆಗೆ 26 ಟಿ-20 ಪಂದ್ಯಗಳು ನಡೆದಿದ್ದು, ಭಾರತ ತಂಡ 15 ಪಂದ್ಯಗಳನ್ನು ಗೆದ್ದಿದ್ದರೆ, ಆಸ್ಟ್ರೇಲಿಯಾ ಕೇವಲ 10 ಪಂದ್ಯಗಳನ್ನು ತನ್ನದಾಗಿಸಿಕೊಂಡಿದೆ. ಇದರಲ್ಲಿ ಒಂದು ಪಂದ್ಯ ಟೈ ಆಗಿದೆ. 6 ತಿಂಗಳ ಬಳಿಕ ನಡೆಯಲಿರುವ ಟಿ20 ವಿಶ್ವಕಪ್ ಮೇಲೆ ಎರಡೂ ತಂಡಗಳು ಕಣ್ಣಿಟ್ಟಿವೆ. ಶೀಘ್ರದಲ್ಲೇ ಟಿ20 ವಿಶ್ವಕಪ್ ಟೂರ್ನಿ ಆಯೋಜನೆಗೊಳ್ಳಲಿದೆ. ಈ ನಿಟ್ಟಿನಲ್ಲಿ ಉತ್ತಮ ತಂಡವನ್ನು ಕಟ್ಟುವ ನಿರೀಕ್ಷೆಯಲ್ಲಿವೆ ಉಭಯ ತಂಡಗಳು. ಹೀಗಾಗಿ ಈ ಸರಣಿ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು ಯುವ ಆಟಗಾರರ ತಮಗೆ ಸಿಕ್ಕ ಅವಕಾಶವನ್ನು ಹೇಗೆ ಬಳಸಿಕೊಳ್ಳಲಿದ್ದಾರೆ ಎನ್ನುವುದು ಮುಖ್ಯವಾಗಲಿದೆ.

ವಿಶಾಖಪಟ್ಟಣಂನ ಈ ಕ್ರಿಕೆಟ್ ಮೈದಾನ ಸಮತೋಲಿತ ಪಿಚ್ ಆಗಿದ್ದು ಕಳೆದ 10 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡದ ಸರಾಸರಿ ಸ್ಕೋರ್ 132 ಆಗಿದೆ. ಚೇಸಿಂಗ್ ಆಯ್ಕೆ ಮಾಡಿಕೊಳ್ಳುವವರಿಗೆ ಇಲ್ಲಿ ಅವಕಾಶ ಹೆಚ್ಚು. ಕೆಲವು ಸಲ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಹೊಂದಿಕೊಳ್ಳುತ್ತದೆ.

ಪಂದ್ಯ ನಡೆಯುವ ಸಮಯ ವಿಶಾಖಪಟ್ಟಣಂನಲ್ಲಿ ತಾಪಮಾನ ಸುಮಾರು 28 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರದಲ್ಲಿ ಶೇ.60 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಬಹುಶಃ ಮಧ್ಯಾಹ್ನ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಪಂದ್ಯದ ವೇಳೆ ಆಕಾಶವು ನೀಲಿಯಾಗಿರಲಿದೆ. ಇದರಿಂದಾಗಿ ಪಂದ್ಯವು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರತ (ಸಂಭಾವ್ಯ): ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್. ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ಶ್ರೇಯಸ್ ಅಯ್ಯರ್ (ಕಳೆದ ಎರಡು ಪಂದ್ಯಗಳು ಮಾತ್ರ)

ಆಸ್ಟ್ರೇಲಿಯಾ (ಸಂಭಾವ್ಯ): ಮ್ಯಾಥ್ಯೂ ವೇಡ್ (ನಾಯಕ), ಆರನ್ ಹಾರ್ಡಿ, ಜೇಸನ್ ಬೆಹ್ರೆನ್‌ಡಾರ್ಫ್, ಸೀನ್ ಅಬಾಟ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವಿರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಕೇನ್ ರಿಚರ್ಡ್‌ಸನ್, ಆಡಮ್ ಝಂಪಾ.

ಇದನ್ನೂ ಓದಿ: ವಿಶ್ವಕಪ್ ಸೋಲಿನಿಂದ ಹೊರಬರಲು ಸಮಯ ಬೇಕು, ಹೊಸ ತಂಡ ಮುನ್ನಡೆಸಲು ಉತ್ಸುಕ- ಸೂರ್ಯ ಕುಮಾರ್ ಯಾದವ್

Last Updated : Nov 23, 2023, 2:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.