ETV Bharat / sports

ಏಷ್ಯಾಕಪ್ 2023: ಭಾರತ- ಬಾಂಗ್ಲಾದೇಶ ನಡುವೆ ಹಣಾಹಣಿ... ಪಂದ್ಯಕ್ಕೆ ವರುಣನ ಭೀತಿ - ಭಾರತ ಬಾಂಗ್ಲಾದೇಶ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ

Asia Cup 2023 IND VS BAN: ಏಷ್ಯಾಕಪ್ 2023ರ ಸೂಪರ್ 4 ಸುತ್ತಿನ ಕೊನೆಯ ಪಂದ್ಯದಲ್ಲಿ ಇಂದು (ಶುಕ್ರವಾರ) ಭಾರತ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.

Asia Cup 2023 IND VS BAN
ಭಾರತ- ಬಾಂಗ್ಲಾದೇಶ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ, ಹೀಗಿದೆ ನೋಡಿ ಪ್ರೇಮದಾಸ ಸ್ಟೇಡಿಯಂನ ಪಿಚ್...
author img

By ETV Bharat Karnataka Team

Published : Sep 15, 2023, 1:02 PM IST

Updated : Sep 15, 2023, 1:29 PM IST

ನವದೆಹಲಿ: ಏಷ್ಯಾಕಪ್ 2023ರ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರಾಗಲಿವೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಫೈನಲ್​ ಪ್ರವೇಶಿಸಿರುವ ಭಾರತ ತಂಡಕ್ಕೆ ಈ ಪಂದ್ಯವು ಔಪಚಾರಿಕವಾಗಿದೆ. ಇನ್ನೊಂದೆಡೆ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾ ತಂಡ ಈ ಸುತ್ತಿನಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

ಫೈನಲ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಎದುರಿಸಲಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಸಾಮರ್ಥ್ಯ ಪರೀಕ್ಷೆಗೆ ಅವಕಾಶ ಸಿಕ್ಕಂತಾಗಲಿದೆ. ಈ ಹಿಂದಿನ ಪಂದ್ಯಗಳಲ್ಲಿ 11ರ ಬಳಗದಲ್ಲಿ ಸ್ಥಾನ ಪಡೆಯದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಈ ನಡುವೆ ಪಂದ್ಯಕ್ಕೆ ಮಳೆಯು ಕಾಡುವ ಸಾಧ್ಯತೆಯಿದೆ. ಹಾಗಾದ್ರೆ, ಈ ಪಂದ್ಯಕ್ಕೂ ಮುನ್ನ ಪ್ರೇಮದಾಸ ಸ್ಟೇಡಿಯಂನ ಪಿಚ್ ಮತ್ತು ಹವಾಮಾನ ವರದಿಯ ಕುರಿತು ತಿಳಿಯೋಣ ಬನ್ನಿ.

ಪಿಚ್ ಕುರಿತ ಮಾಹಿತಿ ಇಲ್ಲಿದೆ ನೋಡಿ: ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಸದಾ ಸಹಾಯ ಮಾಡುತ್ತದೆ. ಆದರೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಇಲ್ಲಿಯೂ ದೊಡ್ಡ ಮೊತ್ತ ಗಳಿಕೆ ಮಾಡುತ್ತಿರುವುದು ಕೂಡ ಕಂಡುಬಂದಿದೆ. ಈ ಪಿಚ್‌ನಲ್ಲಿ ಆರಂಭದಲ್ಲಿ ಚೆಂಡು​ ವೇಗದ ಬೌಲರ್‌ಗಳಿಗೆ ನೆರವು ನೀಡಲಿದೆ. ಆದರೆ, ಬಾಲ್ ಹಳೆಯದಾದ ನಂತರ ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಬಹುದು. ಈ ಮೈದಾನದಲ್ಲಿ ಟಾಸ್ ಗೆದ್ದ ನಂತರ ಉಭಯ ತಂಡಗಳ ನಾಯಕರು ಮೊದಲು ಬ್ಯಾಟಿಂಗ್ ಮಾಡಲು ಬಯಸುತ್ತಾರೆ. ಇದೇ ಮೈದಾನದಲ್ಲಿ ಈ ಹಿಂದೆ ಪಾಕಿಸ್ತಾನದ ವಿರುದ್ಧ ಆಡಿದ್ದ ಭಾರತ 356 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತ್ತು.

ಏನು ಹೇಳುತ್ತೆ ಹವಾಮಾನ ವರದಿ?: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಈ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆಯೂ ಹೆಚ್ಚಿದೆ. ಹವಾಮಾನ ಇಲಾಖೆಯ ವರದಿಗಳ ಪ್ರಕಾರ, ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4 ರವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಡೀ ಪಂದ್ಯದ ವೇಳೆ ಮೈದಾನದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಈ ಪಂದ್ಯದ ಸಮಯದಲ್ಲಿ ಶೇ.88 ರಷ್ಟು ಮಳೆ ಬೀಳುವ ಸಾಧ್ಯತೆಯಿದೆ. ಇದರಿಂದ ಈ ಪಂದ್ಯದಲ್ಲೂ ಓವರ್‌ಗಳ ಕಡಿತ ಸಾಧ್ಯತೆ ಹೆಚ್ಚಿದೆ. ಪಂದ್ಯವು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದ್ದು, 2.30ಕ್ಕೆ ಟಾಸ್ ಇರಲಿದೆ.

ಇದನ್ನೂ ಓದಿ: ಏಷ್ಯಾ ಕಪ್: ಕೊನೆಯ ಎಸೆತದಲ್ಲಿ ಪಾಕ್​ಗೆ ಸೋಲುಣಿಸಿದ ಲಂಕಾ.. ​ಟ್ರೋಫಿಗಾಗಿ ಭಾರತದ ಎದುರು ಸೆಣಸು

Last Updated : Sep 15, 2023, 1:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.