ನಾಟಿಂಗ್ಹ್ಯಾಮ್: ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ನಾಟಿಂಗ್ಹ್ಯಾಮ್ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನಲ್ಲಿ 2ನೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಮೊದಲ ಪಂದ್ಯ ಆರಂಭವಾಗುತ್ತಿದೆ. ಅಂಕ ಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕಳೆದ ಆವೃತ್ತಿಯಂತೆ ಸರಣಿಗೆ ಅಂಕಗಳನ್ನು ನೀಡದೆ, ಪ್ರತಿಯೊಂದು ಪಂದ್ಯಕ್ಕೂ ಅಂಕವನ್ನು ನೀಡಲಾಗುತ್ತಿದೆ.
ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಕಣಕ್ಕಿಳಿಯುತ್ತಿದ್ದು, ಅವರು 2 ವರ್ಷಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳುತ್ತಿದ್ದಾರೆ. 2019ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಮೊದಲ ಟೂರ್ನಮೆಂಟ್ನಲ್ಲಿ ಅವರು ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನಾಡಿದ್ದರು.
ಆಶ್ಚರ್ಯ ಎಂದರೆ ಭಾರತ ತಂಡದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಈ ಪಂದ್ಯದಲ್ಲಿ ಅವಕಾಶ ಪಡೆದಿಲ್ಲ, ಇವರ ಬದಲಾಗಿ ಶಾರ್ದುಲ್ ಠಾಕೂರ್ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಭಾರತ ತಂಡದಲ್ಲಿ 4 ವೇಗಿಗಳಿದ್ದರೆ, ಜಡೇಜಾ ಏಕೈಕ ಸ್ಪಿನ್ನರ್ ಆಗಿ ಅವಕಾಶ ಪಡೆದಿದ್ದಾರೆ.
ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ,ಮೊಹಮ್ಮದ್ ಸಿರಾಜ್
ಇಂಗ್ಲೆಂಡ್: ರೋರಿ ಬರ್ನ್ಸ್, ಡಾಮ್ ಸಿಬ್ಲೆ, ಜ್ಯಾಕ್ ಕ್ರಾಲಿ, ಜೋ ರೂಟ್ (ನಾಯಕ), ಜಾನಿ ಬೈರ್ಸ್ಟೋವ್, ಡ್ಯಾನ್ ಲಾರೆನ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಆಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್