ಮೌಂಟ್ ಮೌಂಗನ್ಯುಯಿ: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ಮೌಂಟ್ ಮೌಂಗನ್ಯುಯಿ ಬೇ ಓವಲ್ ಮೈದಾನದಲ್ಲಿ ಎರಡನೇ ಟಿ20 ಕ್ರಿಕೆಟ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ರಿಷಭ್ ಪಂತ್ ಮತ್ತು ಇಶಾನ್ ಕಿಶನ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿದೆ. ತಂಡದಲ್ಲಿ ಯಜ್ವೇಂದ್ರ ಚಹಲ್, ಸಿರಾಜ್ ಸ್ಥಾನ ಪಡೆದಿದ್ದಾರೆ. ಸದ್ಯ 5 ಓವರುಗಳಿಗೆ ಯಾವುದೇ ವಿಕೆಟ್ ನಷ್ಟವಿಲ್ಲದೇ ತಂಡ 36 ರನ್‌ಗಳನ್ನು ಗಳಿಸಿದೆ.
ಭಾರತ (ಪ್ಲೇಯಿಂಗ್ XI): ಇಶಾನ್ ಕಿಶನ್, ರಿಷಭ್ ಪಂತ್(ವಿ.ಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ(ನಾಯಕ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.
ನ್ಯೂಜಿಲೆಂಡ್ (ಪ್ಲೇಯಿಂಗ್ XI): ಫಿನ್ ಅಲೆನ್, ಡೆವೊನ್ ಕಾನ್ವೇ(ವಿ.ಕೀ), ಕೇನ್ ವಿಲಿಯಮ್ಸನ್(ನಾಯಕ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್.
ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಒಂದು ಎಸೆತವೂ ಕಾಣದೆ ರದ್ದುಗೊಂಡು ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಆದರೆ ಇಂದು ನಡೆಯುತ್ತಿರುವ ಎರಡನೇ ಟಿ20 ಪಂದ್ಯಕ್ಕೆ ಮಳೆರಾಯನ ಅಡ್ಡಿ ಇಲ್ಲವೆಂದು ಹವಾಮಾನ ವರದಿ ಹೇಳಿದೆ. ಬೇ ಓವಲ್ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ರನ್ ಮಳೆ ಸುರಿಯುವ ಸಂಭವವಿದೆ.
ಇದನ್ನೂ ಓದಿ : ಭಾರತ-ನ್ಯೂಜಿಲೆಂಡ್ ಎರಡನೇ ಟಿ20: ಇಂದಿನ ಪಂದ್ಯಕ್ಕೂ ಕಾಡುವನೇ ಮಳೆರಾಯ?