ETV Bharat / sports

India vs South Africa T20.. ದೇವರನಾಡಿನಲ್ಲಿಂದು ದಕ್ಷಿಣ ಆಫ್ರಿಕ-ಭಾರತ ಹಣಾಹಣಿ

author img

By

Published : Sep 28, 2022, 7:46 AM IST

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1ರ ಅಂತರದಲ್ಲಿ ಗೆದ್ದಿರುವ ಟೀಂ ಇಂಡಿಯಾ ಇಂದಿನಿಂದ ದಕ್ಷಿಣ ಆಫ್ರಿಕ ವಿರುದ್ಧ ಮೊದಲ ಟಿ20 ಪಂದ್ಯವನ್ನು ಆಡಲಿದೆ.

India vs South Africa frist t20 match  frist t20 match in Thiruvananthapuram  Greenfield International Stadium  South Africa tour of India 2022  India vs South Africa t20 series  ದಕ್ಷಿಣಾ ಆಫ್ರಿಕಾ ವಿರುದ್ಧ ಭಾರತ ಟಿ20 ಸರಣಿ  ಮೊದಲ ಟಿ20 ಪಂದ್ಯಕ್ಕೆ ಉಭಯ ತಂಡಗಳು ಸಜ್ಜು  ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿ  ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ  ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20  ಕೇರಳ ಕ್ರಿಕೆಟ್ ಸಂಸ್ಥೆ  ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂ  ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ
ದಕ್ಷಿಣಾ ಆಫ್ರಿಕಾ ವಿರುದ್ಧ ಭಾರತ ಟಿ20 ಸರಣಿ

ತಿರುವನಂತಪುರಂ(ಕೇರಳ): ದಕ್ಷಿಣ ಆಫ್ರಿಕ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ಮತ್ತು ಅಭಿಮಾನಿಗಳ ಅದ್ಧೂರಿ ಸ್ವಾಗತದ ನಡುವೆ ಭಾರತ ಕ್ರಿಕೆಟ್ ತಂಡ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಗಳವಾರ ಆಗಮಿಸಿದರು.

ಇಲ್ಲಿನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ಸಂಜೆ 7 ಗಂಟೆಗೆ ಮೊದಲ ಟಿ20 ಪಂದ್ಯ ನಡೆಯಲಿದ್ದು, ದಕ್ಷಿಣ ಆಫ್ರಿಕ ವಿರುದ್ಧ ಭಾರತ ತಂಡ ಕಣಕ್ಕಿಳಿಯಲಿದೆ. ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕ ತಂಡ ಕೂಡ ಭಾನುವಾರ ರಾಜ್ಯ ರಾಜಧಾನಿ ತಲುಪಿದೆ. ಇನ್ನು, ಭಾರತ ತಂಡ ಮಂಗಳವಾರ ಸಂಜೆ 5 ರಿಂದ ರಾತ್ರಿ 8ರವರೆಗೆ ಅಭ್ಯಾಸ ನಡೆಸಿದ್ದು, ಇದಕ್ಕೂ ಮುನ್ನ ಎದುರಾಳಿ ದಕ್ಷಿಣ ಆಫ್ರಿಕ ತಂಡವು ಮಧ್ಯಾಹ್ನ 1.00 ರಿಂದ 4.00 ರವರೆಗೆ ಮೈದಾನದಲ್ಲಿ ಅಭ್ಯಾಸ ನಡೆಸಿದೆ ಎಂದು ಕೆಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಿನ್ನೆ ಸಂಜೆ ಉಭಯ ತಂಡಗಳ ನಾಯಕರು ಮಾಧ್ಯಮದವರನ್ನು ಭೇಟಿ ಮಾಡಿದ್ದರು. ಕ್ರೀಡಾಂಗಣವು 55,000 ಆಸನಗಳ ಸಾಮರ್ಥ್ಯವನ್ನು ಹೊಂದಿದ್ದು, ಈಗಾಗಲೇ ಎಲ್ಲ ಟಿಕೆಟ್​ಗಳು ಸೋಲ್ಡ್​ಔಟ್​ ಆಗಿವೆ ಎಂದು ತಿಳಿದು ಬಂದಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಬಾಜ್ ಅಹ್ಮದ್, ಆರ್. ಅಶ್ವಿನ್, ಯಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಟ್ರಿಸ್ಟಾನ್ ಸ್ಟಬ್ಸ್.

ಓದಿ: ಭಾರತ- ಪಾಕ್​ ಟೆಸ್ಟ್​ ಸರಣಿಗೆ ಇಂಗ್ಲೆಂಡ್​ ಪ್ರಸ್ತಾಪ.. ಸಾಧ್ಯವಿಲ್ಲ ಎಂದ ಬಿಸಿಸಿಐ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.