ETV Bharat / sports

ಭಾರತ 3ನೇ ಟೆಸ್ಟ್​ ಸೋಲಲಿದೆ, ಆದರೆ 2ನೇ ಇನ್ನಿಂಗ್ಸ್​​ನಲ್ಲಿ ಉತ್ತಮ ಪ್ರದರ್ಶನ ನೀಡುವ ಅವಕಾಶ: ಮೈಕಲ್ ವಾನ್

author img

By

Published : Aug 27, 2021, 3:08 PM IST

ಮೂರನೇ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​​ನಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ್ದು, ಹೀಗಾಗಿ ಪಂದ್ಯ ಕೈಚೆಲ್ಲುವ ಎಲ್ಲ ಸಾಧ್ಯತೆಗಳಿವೆ.

Vaughan
Vaughan

ಲೀಡ್ಸ್​​(ಇಂಗ್ಲೆಂಡ್​): ಆತಿಥೇಯ ಇಂಗ್ಲೆಂಡ್​ ವಿರುದ್ಧದ ಮೂರನೇ ಟೆಸ್ಟ್​​ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಹೀಗಾಗಿ ಸೋಲಿನ ಸುಳಿಗೆ ಬಂದು ನಿಂತಿದೆ. ಇದೇ ವಿಚಾರವಾಗಿ ಮಾತನಾಡಿರುವ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್​ ಮೈಕಲ್​ ವಾನ್​, ಈ ಟೆಸ್ಟ್​ನಲ್ಲಿ ಭಾರತ ಸೋಲು ಕಾಣಲಿದೆ. ಆದರೆ, ಎರಡನೇ ಇನ್ನಿಂಗ್ಸ್​​ನಲ್ಲಿ ಉತ್ತಮ ಪ್ರದರ್ಶನ ನೀಡುವ ಅವಕಾಶವಿದೆ ಎಂದಿದ್ದಾರೆ.

ಇಂಗ್ಲೆಂಡ್​ ಬೌಲಿಂಗ್​ ದಾಳಿಗೆ ಸಂಪೂರ್ಣವಾಗಿ ತತ್ತರಿಸಿ ಹೋದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​​ನಲ್ಲಿ ಕೇವಲ 78 ರನ್​​ಗಳಿಗೆ ಆಲೌಟ್​​ ಆಗಿದೆ. ಇದಕ್ಕೆ ಪ್ರತ್ಯುತ್ತರವಾಗಿ ಇಂಗ್ಲೆಂಡ್​ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 8 ವಿಕೆಟ್​ನಷ್ಟಕ್ಕೆ 423ರನ್​ಗಳಿಕೆ ಮಾಡಿದ್ದು, 345ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

ಬ್ಯಾಟಿಂಗ್​ನಲ್ಲಿ ಸಂಪೂರ್ಣವಾಗಿ ವೈಫಲ್ಯ ಅನುಭವಿಸಿರುವ ರೋಹಿತ್​ ಶರ್ಮಾ, ರಹಾನೆ, ಪೂಜಾರಾ, ವಿರಾಟ್​ ಕೊಹ್ಲಿ ಸೇರಿದಂತೆ ಎಲ್ಲ ಬ್ಯಾಟ್ಸ್​​ಮನ್​ಗಳು ಇದೀಗ ಎರಡನೇ ಇನ್ನಿಂಗ್ಸ್​ನಲ್ಲಿ ಉತ್ತಮ ಪ್ರದರ್ಶನ ನೀಡಿ, ಮುಂದಿನ ಪಂದ್ಯಕ್ಕೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇದೇ ವಿಚಾರವಾಗಿ ವಾನ್ ಮಾತನಾಡಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಾಣಲಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಇನ್ಸ್​ಟಾದಲ್ಲಿ ಮುಖ ಮರೆಮಾಚಿದ ಸೆಲ್ಫಿ ಹಾಕಿರುವ ಸ್ಯಾಂಡಲ್​ವುಡ್ ಕ್ವೀನ್ ​: ಅತ್ಯಾಚಾರದ ವಿರುದ್ಧ ಕಿಡಿ

ಟೀಂ ಇಂಡಿಯಾ ಬ್ಯಾಟ್ಸ್​ಮನ್​ಗಳು ಸ್ಕೋರ್​​ಬೋರ್ಡ್​ ಮರೆತು ಇದೀಗ ಬ್ಯಾಟಿಂಗ್ ನಡೆಸಬೇಕಾಗಿದ್ದು, ವೈಯಕ್ತಿಕವಾಗಿ ಉತ್ತಮ ರನ್​ಗಳಿಕೆ ಮಾಡುವುದರಿಂದ ಮುಂದಿನ ಪಂದ್ಯಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಐದು ಟೆಸ್ಟ್​​ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಭಾಗಿಯಾಗಿದ್ದು, ಈಗಾಗಲೇ ಕೊಹ್ಲಿ ಪಡೆ 1-0 ಅಂತರದಲ್ಲಿ ಮುನ್ನಡೆ ಪಡೆದುಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.