ETV Bharat / sports

Bangladesh tour: ಬಾಂಗ್ಲಾ ಪ್ರವಾಸಕ್ಕೆ ಭಾರತೀಯ ವನಿತೆಯರ ತಂಡ ಪ್ರಕಟ.. ರೇಣುಕಾ ಸಿಂಗ್, ರಿಚಾ ಘೋಷ್​ಗಿಲ್ಲ ಸ್ಥಾನ

ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶ್ರೇಯಾಂಕಾ ಪಾಟೀಲ್​ ಅವರು ಈ ಬಾರಿ ತಂಡಕ್ಕೆ ಪಾದಾರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ.

India Women name
India Women name
author img

By

Published : Jul 3, 2023, 3:31 PM IST

ಮುಂಬರುವ ಬಾಂಗ್ಲಾದೇಶದ ಸೀಮಿತ ಓವರ್‌ಗಳ ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ 18 ಸದಸ್ಯರ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಬಲಗೈ ವೇಗಿ ರೇಣುಕಾ ಸಿಂಗ್ ಮತ್ತು ರಿಚಾ ಘೋಷ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅಲ್ಲದೇ ಯುವ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಪಂದ್ಯಗಳು ಜುಲೈ 9 ರಿಂದ ಮೀರ್‌ಪುರನಲ್ಲಿ ಪ್ರಾರಂಭವಾಗಲಿದೆ.

ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಅವರನ್ನು ಪ್ರವಾಸಕ್ಕೆ ಉಪನಾಯಕಿಯಾಗಿ ನೇಮಿಸಲಾಗಿದೆ. ಭಾರತ ತಂಡವು ಬಾಂಗ್ಲಾದೇಶದ ವಿರುದ್ಧ ಮೂರು ಅಂತಾರಾಷ್ಟ್ರೀಯ ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಎಲ್ಲಾ ಆರು ಪಂದ್ಯಗಳು ಮೀರ್‌ಪುರದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (SBNCS) ನಲ್ಲಿ ನಡೆಯಲಿವೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಮತ್ತು ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಅವರನ್ನು ಹೊರಗಿಟ್ಟಿರುವುದು ಆಶ್ಚರ್ಯಕರವಾಗಿದೆ. ವಿಶೇಷವಾಗಿ ಅವರ ಇತ್ತೀಚಿಗೆ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ಪರಿಗಣಿಸಲಾಗಿಲ್ಲ. ಕಳೆದ ತಿಂಗಳು ಹಾಂಕಾಂಗ್‌ನಲ್ಲಿ ನಡೆದ ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್‌ನಲ್ಲಿ ಭಾರತದ ಗೆಲುವಿನ ಸಂದರ್ಭದಲ್ಲಿ ಪಾಟೀಲ್ ಒಂಬತ್ತು ವಿಕೆಟ್‌ಗಳೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಘೋಷ್ ಅವರನ್ನು ಕೈಬಿಡಲು ಕಾರಣಗಳು ಸ್ಪಷ್ಟವಾಗಿಲ್ಲ, ಅಭಿಮಾನಿಗಳು ಮತ್ತು ಕ್ರಿಕೆಟ್​ ವಿಮರ್ಶಕರು ಈ ನಿರ್ಧಾರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅದೇ ರೀತಿ, ಹಾಂಗ್ ಕಾಂಗ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಹೊರತಾಗಿಯೂ, ಹಿರಿಯರ ತಂಡದಲ್ಲಿ ಪಾದಾರ್ಪಣೆ ಮಾಡಲು ಅವಕಾಶ ಸಿಗದಿರುವ ಬಗ್ಗೆ ಹಲವಾರು ಪ್ರಶ್ನೆಗಳು ಆಯ್ಕೆ ಸಮಿತಿಯ ನಿರ್ಧಾರದ ಬಗ್ಗೆ ಏಳುತ್ತಿವೆ.

ರೇಣುಕಾ ಸಿಂಗ್ ಗಾಯದ ಸಮಸ್ಯೆಯಿಂದಾಗಿ ಇಡೀ ಸರಣಿಯಲ್ಲಿ ತಂಡದ ಭಾಗವಾಗಿಲ್ಲ ಎಂದು ವರದಿಯಾಗಿದೆ. ಅವರ ಅನುಪಸ್ಥಿತಿಯಲ್ಲಿ ಯಾಸ್ತಿಕಾ ಭಾಟಿಯಾ ಮತ್ತು ಉಮಾ ಚೆಟ್ರಿ ಅವರನ್ನು ವಿಕೆಟ್‌ ಕೀಪರ್‌ಗಳಾಗಿ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಸ್ಪಿನ್ ಆಲ್ ರೌಂಡರ್ ಸ್ನೇಹ್ ರಾಣಾ ಟಿ20 ತಂಡದ ಭಾಗವಾಗಿಲ್ಲ, ಆದರೆ ಏಕದಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ, ಎಸ್ ಮೇಘನಾ ಅವರನ್ನು ಟಿ 20 ಮಾದರಿಯಲ್ಲಿ ಸೇರಿಸಲಾಗಿದೆ. ಆದರೆ 50 ಓವರ್‌ಗಳ ಸರಣಿಗೆ ಆಯ್ಕೆಯಾಗಿಲ್ಲ.

ತಂಡಗಳು: ಭಾರತದ ಟಿ20ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿಕೆಟ್​ ಕೀಪರ್​), ಹರ್ಲೀನ್ ಡಿಯೋಲ್, ದೇವಿಕಾ ವೈದ್ಯ, ಉಮಾ ಚೆಟ್ರಿ (ವಿಕೆಟ್​ ಕೀಪರ್​), ಅಮಂಜೋತ್ ಕೌರ್, ಎಸ್​. ಮೇಘನಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾಣಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ, ಅನುಷಾ ಬಾರೆಡ್ಡಿ, ಮಿನ್ನು ಮಣಿ.

ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿಕೆಟ್​ ಕೀಪರ್​), ಹರ್ಲೀನ್ ಡಿಯೋಲ್, ದೇವಿಕಾ ವೈದ್ಯ, ಉಮಾ ಚೆಟ್ರಿ (ವಿಕೆಟ್​ ಕೀಪರ್​), ಅಮಾನ್ಜೋತ್ ಕೌರ್, ಪ್ರಿಯಾ ಪುನಿಯಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾಣಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ, ಅನುಷಾ ಬಾರೆಡ್ಡಿ, ಸ್ನೇಹ ರಾಣಾ.

ಜುಲೈ 9 ರಂದು ಮೀರ್‌ಪುರದಲ್ಲಿ ಮೊದಲ ಟಿ20 ಪಂದ್ಯದೊಂದಿಗೆ ಪ್ರವಾಸ ಆರಂಭವಾಗಲಿದೆ. ನಂತರ ಜುಲೈ 11 ಮತ್ತು 13 ರಂದು ಮುಂದಿನ ಎರಡು ಪಂದ್ಯಗಳು ಮತ್ತು ಏಕದಿನ ಪಂದ್ಯ ಕ್ರಮವಾಗಿ ಜುಲೈ 16, 19 ಮತ್ತು 22 ರಂದು ನಡೆಯಲಿವೆ. ಎಲ್ಲಾ ಪಂದ್ಯಗಳು ಒಂದೇ ಮೈದಾನದಲ್ಲಿ ನಡೆಯಲಿವೆ.

ಇದನ್ನೂ ಓದಿ: Ashes Test: ಆಸ್ಟ್ರೇಲಿಯಾ ಆಟಗಾರರೊಂದಿಗೆ ಅನುಚಿತವಾಗಿ ವರ್ತಿಸಿದ ಮೂವರು ಸದಸ್ಯರ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.