ಚಂಢೀಗಡ: ವಿಜಯ್ ಹಜಾರೆ ಟ್ರೋಫಿ ಪ್ರಸ್ತುತ ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ನಡೆಸಲಾಗುತ್ತಿದೆ. ಈ ಟೂರ್ನಿಯೂ ಭಾರತೀಯ ಆಟಗಾರರಿಗೆ ಅತ್ಯಂತ ಮಹತ್ವದ್ದಾಗಿದೆ. ಐಪಿಎಲ್ ಹರಾಜಿಗೂ ಮುನ್ನ ಹಲವು ಯುವ ಆಟಗಾರರು ಫ್ರಾಂಚೈಸಿಗಳ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಮತ್ತೆ ಕೆಲ ಆಟಗಾರರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಈ ಪೈಕಿ 31ರ ಹರೆಯದ ಆಟಗಾರ ಕೂಡ ಇಂಥದ್ದೇ ಸಾಧನೆ ಮಾಡಿದ್ದು, ತಮ್ಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದಿದ್ದಾರೆ.
-
Five wicket haul for Deepak Chahar in the Vijay Hazare Trophy against Gujarat. pic.twitter.com/5Zqdw8D7yB
— Johns. (@CricCrazyJohns) November 25, 2023 " class="align-text-top noRightClick twitterSection" data="
">Five wicket haul for Deepak Chahar in the Vijay Hazare Trophy against Gujarat. pic.twitter.com/5Zqdw8D7yB
— Johns. (@CricCrazyJohns) November 25, 2023Five wicket haul for Deepak Chahar in the Vijay Hazare Trophy against Gujarat. pic.twitter.com/5Zqdw8D7yB
— Johns. (@CricCrazyJohns) November 25, 2023
ಭಾರತದ ವೇಗದ ಬೌಲರ್ ದೀಪಕ್ ಚಹಾರ್ ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ರಾಜಸ್ಥಾನ ಮತ್ತು ಗುಜರಾತ್ ನಡುವಿನ 50 ಓವರ್‌ಗಳ ಪಂದ್ಯದಲ್ಲಿ ಗುಜರಾತ್ ವಿರದ್ಧ ಬಿಗಿ ಬೌಲಿಂಗ್ ದಾಳಿ ನಡೆಸಿ 6 ವಿಕೆಗಳನ್ನು ಪಡೆದು ಮಿಂಚಿದ್ದಾರೆ. ದೀಪಕ್ ಹೂಡಾ ನಾಯಕತ್ವದಲ್ಲಿ ರಾಜಸ್ಥಾನ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಈ ಪಂದ್ಯದಲ್ಲಿ ರಾಜಸ್ಥಾನದ ಪರ ದೀಪಕ್ ಚಹಾರ್ ತಮ್ಮ 10 ಓವರ್‌ಗಳ ಕೋಟಾದಲ್ಲಿ 41 ರನ್‌ಗಳನ್ನು ನೀಡಿ 6 ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದರು. ಗುಜರಾತ್‌ನ ಆರಂಭಿಕ ಬ್ಯಾಟ್ಸ್‌ಮನ್ ಪ್ರಿಯಾಂಕ್ ಪಾಂಚಾಲ್ ಮತ್ತು ಐದು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವಿಕೆಟ್‌ಗಳನ್ನು ಪಡೆದರು.
ಚಹರ್ ಅವರ ಎರಡನೇ ಬಾರಿಗೆ ಐದು ವಿಕೆಟ್ ಗೊಂಚಲ ಪಡೆದರು. ಇದು ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಚಹರ್ ಅವರ ಎರಡನೇ ಬಾರಿಗೆ ಐದು ವಿಕೆಟ್ ಪಡೆದ ಸಾಧನೆಯಾಗಿದೆ. ಇದಕ್ಕೂ ಮುನ್ನ ಪಂದ್ಯವೊಂದರಲ್ಲಿ 27 ರನ್ ನೀಡಿ ಐದು ವಿಕೆಟ್ ಕಬಳಿಸಿದ್ದರು. ಇದೀಗ ಗುಜರಾತ್ ವಿರುದ್ಧ 6 ವಿಕೆಟ್ ಪಡೆದದ್ದು, ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಚಹರ್ ತಮ್ಮ 60ನೇ ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ 27ಕ್ಕಿಂತ ಹೆಚ್ಚು ಸರಾಸರಿಯಲ್ಲಿ 82 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್‌ನಲ್ಲಿ ನಾಲ್ಕು ಅರ್ಧಶತಕಗಳನ್ನು ಸಹ ಗಳಿಸಿದ್ದಾರೆ.
ದೀಪಕ್ ಚಹಾರ್ ಭಾರತ ತಂಡಕ್ಕಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದಾರೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಅವರು ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಸಾಧ್ಯವಾಗಲಿಲ್ಲ. ಸದ್ಯ ಚಹಾರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ದೀಪಕ್ ಚಹಾರ್ ಅವರನ್ನು 16 ಕೋಟಿ ರೂಪಾಯಿಗೆ ಖರೀದಿಸಿತ್ತು. ಐಪಿಎಲ್ 2023 ರಲ್ಲಿ, ಅವರು 10 ಪಂದ್ಯಗಳಲ್ಲಿ 13 ವಿಕೆಟ್‌ಗಳನ್ನು ಪಡೆದಿದ್ದರು.
ಇದನ್ನೂ ಓದಿ: ಆಟಗಾರರನ್ನು ಭೇಟಿ ಮಾಡಿ ಧೈರ್ಯ ತುಂಬುವ ಪ್ರಧಾನಿಯನ್ನು ಹಿಂದೆಂದೂ ನೋಡಿಲ್ಲ : ಸೆಹ್ವಾಗ್ ಗುಣಗಾನ