ನವದೆಹಲಿ: ಭಾರತ ತಂಡದ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರ ಬೌಲಿಂಗ್ ಮುಂದೆ ಬ್ಯಾಟರ್ಗಳು ಮಂಡಿಯೂರಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉಮ್ರಾನ್ ವಿಶೇಷ ದಾಖಲೆ ಹೊಂದಿದ್ದಾರೆ. 156 ಕೀಲೋ ವೀಟರ್ ವೇಗದಲ್ಲಿ ಬೌಲಿಂಗ್ ಮಾಡುವ ಮಲಿಕ್, ಭಾರತದ ತಂಡದ ಅತೀ ಹೆಚ್ಚು ವೇಗದಲ್ಲಿ ಮಾಡಿದ ಬೌಲರ್ ಎಂಬ ಖ್ಯಾತಿಗೆ ಒಳಗಾಗಿದ್ದಾರೆ. 151 km ನಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದ ಅವರು, ತಮ್ಮ ದಾಖಲೆಯನ್ನೆ ಮುರಿದು ಇತಿಹಾಸ ನಿರ್ಮಿಸಿದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 17, 19 ಮತ್ತು 22ಕ್ಕೆ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಈ ಸರಣಿಗೆ ಮಲಿಕ್ ಆಯ್ಕೆಯಾಗಿದ್ದಾರೆ. ಈ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ. ಉಮ್ರಾನ್ ಮಲಿಕ್ ಈ ಟೂರ್ನಿಗೆ ತಯಾರಿಯಲ್ಲಿ ನಿರತರಾಗಿದ್ದಾರೆ. ಅವರು ಇದರ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ, ಇದರಲ್ಲಿ ಉಮ್ರಾನ್ ಮೈದಾನದಲ್ಲಿ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ. 19ರಂದು ವಿಶಾಖಪಟ್ಟಣಂನಲ್ಲಿ ಎರಡನೇ ಏಕದಿನ ಪಂದ್ಯ ಮತ್ತು 22ರಂದು ಮೂರನೇ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ.
- " class="align-text-top noRightClick twitterSection" data="
">
ಟೀಂ ಇಂಡಿಯಾ ವೇಗದ ಬೌಲರ್ ಉಮ್ರಾನ್ ಮಲಿಕ್ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಉಮ್ರಾನ್ ಮೈದಾನದಲ್ಲಿ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದು. ಇದರೊಂದಿಗೆ ಉಮ್ರಾನ್ ತಮ್ಮ ಫಿಟ್ನೆಸ್ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಮೈದಾನದ ಹೊರತಾಗಿ ಜಿಮ್‌ನಲ್ಲೂ ಉಮ್ರಾನ್ ಬೆವರು ಸುರಿಸುತ್ತಿದ್ದಾರೆ. ಉಮ್ರಾನ್ ಪಿಚ್ನಲ್ಲಿ ಮತ್ತು ಜಿಮ್‌ನಲ್ಲಿ ಕಷ್ಟಪಟ್ಟು ತಯಾರಿ ನಡೆಸುತ್ತಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಉಮ್ರಾನ್‌ಗೆ ಅವಕಾಶ ಸಿಗಲಿಲ್ಲ, ಆದರೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ತಂಡಕ್ಕೆ ಸೇರಿದ್ದಾರೆ.
ಇದನ್ನೂ ಓದಿ: ನಾಳೆ ವನಿತೆಯರ ವಿಶ್ವಕಪ್ ಅಂತಿಮ ಹಣಾಹಣಿ: ಮೊದಲ ಕಪ್ ಗೆಲ್ಲುವ ತವಕದಲ್ಲಿ ಹರಿಣಗಳ ಪಡೆ
ಮಲಿಕ್ ಇದುವರೆಗೆ ಟೆಸ್ಟ್ಗೆ ಪದಾರ್ಪಣೆ ಮಾಡಿಲ್ಲ. 2022ರ ಭಾರತದ ನ್ಯೂಜಿಲೆಂಡ್ ಪ್ರವಾಸದಲ್ಲಿ ಮಲಿಕ್ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಜನವರಿ 2023 ರಲ್ಲಿ ಗುವಾಹಟಿಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಏಕದಿನದಲ್ಲಿ ಅವರು ಗಂಟೆಗೆ 156 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಎದುರಾಳಿ ತಂಡವನ್ನು ಬೆದರಿಸಿದ್ದರು.
ಶ್ರೀಲಂಕಾ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಟಿ20 ಪಂದ್ಯದಲ್ಲಿ 155 ಕಿ.ಮೀ ವೇಗದಲ್ಲಿ ಚೆಂಡು ಎಸೆದಿದ್ದರು. ಅದಕ್ಕೂ ಮೊದಲು ಅವರು ಐಪಿಎಲ್ 2022 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ಗಾಗಿ ಗಂಟೆಗೆ 157 ಕಿಮೀ ವೇಗದಲ್ಲಿ ಚೆಂಡನ್ನು ಬೌಲ್ ಮಾಡಿದ್ದರು. ಉಮ್ರಾನ್ ಮಲಿಕ್ ಇದುವರೆಗೆ ಏಕದಿನ ಕ್ರಿಕೆಟ್‌ನಲ್ಲಿ 8 ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳ 7 ಇನ್ನಿಂಗ್ಸ್‌ಗಳಲ್ಲಿ 13 ವಿಕೆಟ್‌ಗಳನ್ನು ಪಡೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನ ಟಿ20 ಮಾದರಿಯಲ್ಲಿ ಅವರು ಇದುವರೆಗೆ 8 ಪಂದ್ಯಗಳ 8 ಇನ್ನಿಂಗ್ಸ್‌ಗಳಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದಾರೆ.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನದ್ಕತ್
ಇದನ್ನೂ ಓದಿ: ಅಳುವುದನ್ನು ದೇಶಕ್ಕೆ ತೋರಿಸಲು ನಾನು ಇಚ್ಚಿಸಲ್ಲ: ಕೌರ್ ಬೆಂಬಲವಾಗಿ ನಿಂತ ಅನುಷ್ಕಾ