ETV Bharat / sports

ವಿಂಡೀಸ್​ ವಿರುದ್ಧದ ಏಕದಿನ, ಟಿ-20 ಸರಣಿಗೆ ಭಾರತ ತಂಡ ಪ್ರಕಟ.. ಕೆಲವು ಹೊಸಬರಿಗೆ ಅವಕಾಶ - ಭಾರತ ತಂಡ

ವೆಸ್ಟ್​ ಇಂಡೀಸ್​ ವಿರುದ್ಧದ ಸೀಮಿತ ಓವರ್​ಗಳ ಕ್ರಿಕೆಟ್ ಸರಣಿಗೆ ಭಾರತ ತಂಡ ಆಯ್ಕೆ ಮಾಡಲಾಗಿದ್ದು, ಹಲವು ಹೊಸಬರಿಗೆ ಅವಕಾಶ ನೀಡಲಾಗಿದೆ.

Indian squad announced for ODI and T20I series against the West Indies
ವಿಂಡೀಸ್​ ವಿರುದ್ಧದ ಏಕದಿನ, ಟಿ-20 ಸರಣಿಗೆ ಭಾರತ ತಂಡ ಪ್ರಕಟ
author img

By

Published : Jan 26, 2022, 10:56 PM IST

Updated : Jan 26, 2022, 11:02 PM IST

ಮುಂಬೈ: ಮುಂಬರುವ ವೆಸ್ಟ್​ ಇಂಡೀಸ್​ ವಿರುದ್ಧದ ಸೀಮಿತ ಓವರ್​ಗಳ ಕ್ರಿಕೆಟ್ ಸರಣಿ ಭಾರತ ತಂಡ ಆಯ್ಕೆ ಮಾಡಲಾಗಿದೆ. ಎರಡೂ ಮಾದರಿಗೆ ರೋಹಿತ್​ ಶರ್ಮಾ ನೇತೃತ್ವದ 18 ಮಂದಿ ಆಟಗಾರರನ್ನು ಬಿಸಿಸಿಐ ಘೋಷಿಸಿದೆ.

ಟಿ-20 ಹಾಗೂ ಏಕದಿನ ತಂಡಕ್ಕೆ ವೇಗದ ಬೌಲರ್​ ಅವೇಶ್ ಖಾನ್ ಹಾಗೂ ಯುವ ಸ್ಪಿನ್ನರ್ ರವಿ ಬಿಷ್ಣೋಯ್​ರನ್ನು ಆಯ್ಕೆ ಮಾಡಲಾಗಿದ್ದು, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್ ಕಮ್​ಬ್ಯಾಕ್​ ಮಾಡಿದ್ದಾರೆ. ಅಂತೆಯೇ ದೀಪಕ್ ಹೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆದ ಹೊಸಬರಾಗಿದ್ದಾರೆ.

ವೇಗದ ಬೌಲರ್​ಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಕೆಎಲ್ ರಾಹುಲ್ 2ನೇ ಏಕದಿನ ಪಂದ್ಯದಿಂದ ಲಭ್ಯವಾಗಲಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ರವೀಂದ್ರ ಜಡೇಜಾ ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಈ ಸರಣಿಗೂ ಅಲಭ್ಯರಾಗಿದ್ದಾರೆ. ಸ್ಪಿನ್ನರ್​ ಅಕ್ಷರ್ ಪಟೇಲ್ ಹಾಗೂ ವೆಂಕಟೇಶ್ ಅಯ್ಯರ್ ಟಿ-20 ತಂಡದಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ.

ಟಿ-20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿ.ಕೀ), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್​ ಪಟೇಲ್, ಯುಜುವೇಂದ್ರ ಚಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್​, ಅವೇಶ್ ಖಾನ್, ಹರ್ಷಲ್ ಪಟೇಲ್

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್​, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿ.ಕೀ), ದೀಪಕ್​​ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಹಲ್, ಕುಲದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಇದನ್ನೂ ಓದಿ: ನಾನು ಕಂಡಂತಹ ತೀಕ್ಷ್ಣಕ್ರಿಕೆಟ್ ಮೈಂಡ್​ ಹೊಂದಿದವರಲ್ಲಿ ಎಂಎಸ್​ ಧೋನಿ ಕೂಡ ಒಬ್ಬರು : ಗ್ರೇಗ್ ಚಾಪೆಲ್

Last Updated : Jan 26, 2022, 11:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.