ETV Bharat / sports

ಟೆಸ್ಟ್‌, ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡದಿಂದ ದ.ಆಫ್ರಿಕಾ ಪ್ರವಾಸ ; ಇನ್ನೂ ನಿರ್ಧಾರವಾಗದ ಟಿ-20 ವೇಳಾಪಟ್ಟಿ - ಟಿ-20 ಪಂದ್ಯಗಳ ದಿನಾಂಕ ನಂತರ ದಿನಗಳಲ್ಲಿ ಪ್ರಕಟ - ಜಯ್‌ ಶಾ

ಮೂರು ಟೆಸ್ಟ್‌ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಸ್ಪಷ್ಟಪಡಿಸಿದ್ದಾರೆ. ಆದರೆ, ನಾಲ್ಕು ಟಿ-20 ಪಂದ್ಯಗಳ ವೇಳಾಪಟ್ಟಿಯನ್ನ ನಂತರದ ದಿನಗಳಲ್ಲಿ ಪ್ರಕಟಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ..

India to tour South Africa for three Tests and three ODIS, T20Is to be played later: BCCI
ಟೆಸ್ಟ್‌, ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ಆಫ್ರಿಕಾ ಪ್ರವಾಸ; ನಿರ್ಧಾರವಾಗದ ಟಿ-20 ದಿನಾಂಕ
author img

By

Published : Dec 4, 2021, 12:30 PM IST

ನವದೆಹಲಿ : ಟೀಂ ಇಂಡಿಯಾ ಈಗಾಗಲೇ ನಿಗದಿ ಮಾಡಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್‌ ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದರೆ, ನಾಲ್ಕು ಟಿ-20 ಪಂದ್ಯಗಳ ವೇಳಾಪಟ್ಟಿಯನ್ನ ನಂತರದ ದಿನಗಳಲ್ಲಿ ಪ್ರಕಟಿಸುವುದಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ)ಸ್ಪಷ್ಟಪಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಭಾರತವು ಮೂರು ಟೆಸ್ಟ್‌ ಹಾಗೂ ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕೋವಿಡ್‌ನ ಹೊಸ ರೂಪಾಂತರಿ ಒಮಿಕ್ರಾನ್ ಪತ್ತೆಯಾದ ಬಳಿಕ ಕಳೆದೊಂದು ವಾರದಿಂದ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಲೇ ಇದೆ.

ಹೀಗಾಗಿ, ಭಾರತ ತಂಡ ಹರಿಣಗಳ ನಾಡಿನ ಪ್ರವಾಸದ ಬಗ್ಗೆ ಅನಿಶ್ಚಿತತೆ ಎದುರಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಟೂರ್ನಿ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ.. ನಾಳೆ ಬಿಸಿಸಿಐನಿಂದ ಮಹತ್ವದ ನಿರ್ಧಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.