ಮ್ಯಾಂಚೆಸ್ಟರ್(ಬ್ರಿಟನ್): ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ನಡೆಯಬೇಕಿದ್ದ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ರದ್ದಾಗಿದೆ. ಮ್ಯಾಂಚೆಸ್ಟರ್ನಲ್ಲಿ ಫೈನಲ್ ಪಂದ್ಯ ನಡೆಯಬೇಕಿತ್ತು.
ಕೋವಿಡ್ ಭೀತಿಯಿಂದಾಗಿ ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಇಸಿಬಿ (ECB- ಇಂಗ್ಲೆಂಡ್- ವೇಲ್ಸ್ ಕ್ರಿಕೆಟ್ ಮಂಡಳಿ) ಮತ್ತು ಬಿಸಿಸಿಐ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಇಸಿಬಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಈ ಬಗ್ಗೆ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದು, ಇಂದಿನಿಂದ ಮ್ಯಾಂಚೆಸ್ಟರ್ನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಭಾರತ ತಂಡದ ಕ್ಯಾಂಪ್ನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಭೀತಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಸಿಬಿ ತಿಳಿಸಿದೆ.
-
Following ongoing conversations with the BCCI, the ECB can confirm that the fifth LV= Insurance Test at Emirates Old Trafford, due to start today, will be cancelled.
— England Cricket (@englandcricket) September 10, 2021 " class="align-text-top noRightClick twitterSection" data="
">Following ongoing conversations with the BCCI, the ECB can confirm that the fifth LV= Insurance Test at Emirates Old Trafford, due to start today, will be cancelled.
— England Cricket (@englandcricket) September 10, 2021Following ongoing conversations with the BCCI, the ECB can confirm that the fifth LV= Insurance Test at Emirates Old Trafford, due to start today, will be cancelled.
— England Cricket (@englandcricket) September 10, 2021
ಇದರಿಂದ ಅಭಿಮಾನಿಗಳಿಗೆ ಅಪಾರ ನಿರಾಶೆ ಮತ್ತು ಅನಾನುಕೂಲತೆ ಉಂಟಾಗಿದೆ ಎಂದು ನಮಗೆ ತಿಳಿದಿದೆ. ಈ ಬಗ್ಗೆ ನಾವು ಅಭಿಮಾನಿಗಳು ಮತ್ತು ಪಾಲುದಾರರಿಗೆ ನಮ್ಮ ಕಡೆಯಿಂದ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ2-1ರ ಮುನ್ನಡೆ ಸಾಧಿಸಿತ್ತು. ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು.