ಜೋಧ್ಪುರ್ (ರಾಜಸ್ಥಾನ): ಟಿ-20 ವಿಶ್ವಕಪ್ನಲ್ಲಿ ಭಾರತ-ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈಗಾಗಲೇ ಪಂದ್ಯದ ಟಿಕೆಟ್ಗಳು ಸೋಲ್ಡ್‌ಔಟ್ ಆಗಿವೆ. ಅ.20ರಂದು ನಡೆಯಲಿರುವ ಪಂದ್ಯಾಟ ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಆದರೆ ಈ ನಡುವೆ ಪಂದ್ಯ ನಡೆಸುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಒತ್ತಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಾಗರೀಕರ ಹತ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತ-ಪಾಕ್ ನಡುವಿನ ಕ್ರಿಕೆಟ್ ಪಂದ್ಯದ ಕುರಿತು ಗಂಭೀರವಾಗಿ ಮರುಪರಿಶೀಲಿಸಬೇಕು ಎಂದು ಅವರು ಹೇಳಿದ್ದಾರೆ. ಉಭಯದೇಶಗಳ ನಡುವಿನ ಸಂಬಂಧ ಈಗ ಅಷ್ಟೇನೂ ಉತ್ತಮವಾಗಿಲ್ಲ. ಹೀಗಾಗಿ ಕ್ರಿಕೆಟ್ ಪಂದ್ಯಾಟ ನಡೆಸುವುದು ಸೂಕ್ತವಲ್ಲ ಅನ್ನೋದು ಅವರ ಅಭಿಪ್ರಾಯ.
ಇದನ್ನೂ ಓದಿ: ಟಿ20 ವಿಶ್ವಕಪ್: ದುಬೈನಲ್ಲಿ ಭಾರತ ತಂಡ ಸೇರಿಕೊಂಡ ಮೆಂಟರ್ ಮಹೇಂದ್ರ ಸಿಂಗ್ ಧೋನಿ