ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ ಕ್ಯಾಪ್ಟನ್ ದಂಡ ತೆತ್ತಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್ನಲ್ಲಿ ಇದು ಎರಡನೇ ಪ್ರಕರಣವಾಗಿದೆ.
ನಿನ್ನೆ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಕ್ಯಾಪ್ಟನ್ ಅಜಿಂಕ್ಯಾ ರಹಾನೆ ನಿಧಾನಗತಿ ಬೌಲಿಂಗ್ ಮಾಡಿಸಿದ್ದರು. ಹೀಗಾಗಿ ಅವರು ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದಕ್ಕಾಗಿ 12 ಲಕ್ಷ ದಂಡ ವಿಧಿಸಲಾಗಿದೆ. ಈಗಾಗಲೇ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ರೋಹಿತ್ ಶರ್ಮಾಗೆ ದಂಡ ವಿಧಿಸಲಾಗಿತ್ತು.
ನಿಧಾನಗತಿ ಬೌಲಿಂಗ್: ಮುಂಬೈ ಕ್ಯಾಪ್ಟನ್ ರೋಹಿತ್ ಶರ್ಮಾಗೆ ದಂಡ
ನಿನ್ನೆಯ ಪಂದ್ಯದಲ್ಲಿ ಚೆನ್ನೈ ನೀಡಿದ್ದ 175ರನ್ಗಳ ಟಾರ್ಗೆಟ್ ಬೆನ್ನತ್ತಿದ್ದ ರಾಜಸ್ಥಾನ ತಂಡ 167ರನ್ಗಳಿಕೆ ಮಾಡಿ 8ರನ್ಗಳ ಅಂತರದ ಸೋಲು ಕಂಡಿದೆ.