ಶಾರ್ಜಾ: ಭಾನುವಾರ ನಡೆದ ರಾಜಸ್ಥಾನ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಐಪಿಎಲ್ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ. ಆರಂಭಿಕ ಆಟಗಾರರಾದ ಮಯಾಂಕ್ ಅಗರ್ವಾಲ್ ಮತ್ತು ಕೆ.ಎಲ್.ರಾಹುಲ್ ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಆರಂಭವನ್ನು ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 183 ರನ್ಗಳ ಜೊತೆಯಾಟವಾಡಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಅತಿ ಹೆಚ್ಚು ರನ್ಗಳ ಜೊತೆಯಾಟವಾಗಿದೆ.
![Agarwal, Rahul stitch 2nd highest opening partnership](https://etvbharatimages.akamaized.net/etvbharat/prod-images/barjun800_2709newsroom_1601225055_607.jpg)
183 ರನ್ ಗಳಿಸಿದ ಈ ಜೋಡಿ ಐಪಿಎಲ್ ಇತಿಹಾಸದಲ್ಲಿ ಮೊದಲ ವಿಕೆಟ್‌ಗೆ ಎರಡನೇ ಗರಿಷ್ಠ ರನ್ ಜೊತೆಯಾಟ ನಡೆಸಿತು. ಇಂಡಿಯನ್ ಪ್ರೀಮಿಯರ್ ಲೀಗ್ನ ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 185 ರನ್ ಗಳಿಸಿದ್ದ ಸನ್ ರೈಸರ್ಸ್ ಹೈದರಾಬಾದ್‌ನ ಜಾನಿ ಬೈರ್ ಸ್ಟೋವ್ ಮತ್ತು ಡೇವಿಡ್ ವಾರ್ನರ್ ಗರಿಷ್ಠ ರನ್ ಜೊತೆಯಾಟದ ದಾಖಲೆ ಹೊಂದಿದ್ದಾರೆ.
ಆದರೆ, ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಯಾವುದೇ ವಿಕೆಟ್‌ಗೆ ಅತಿ ಹೆಚ್ಚು ರನ್ಗಳ ಜೊತೆಯಾಟದ ದಾಖಲೆ ಹೊಂದಿದ್ದಾರೆ. 2016ರ ಆವೃತ್ತಿಯಲ್ಲಿ ಈ ಆಟಗಾರರು 229 ರನ್ ಗಳಿಸಿದ್ದಾರೆ.
![Agarwal, Rahul stitch 2nd highest opening partnership](https://etvbharatimages.akamaized.net/etvbharat/prod-images/m9dm_707_2709newsroom_1601225055_896.jpg)
ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ತಂಡಕ್ಕೆ ಆರಂಭಿಕರಾಗಿ ಕಣಕ್ಕಿಳಿದಿದ್ದ ರಾಹುಲ್ ಹಾಗೂ ಮಯಾಂಕ್ 183 ರನ್ಗಳ ಬೃಹತ್ ಜೊತೆಯಾಟ ನೀಡಿದ್ರು. ಕೇವಲ 45 ಎಸೆತಗಳಲ್ಲಿ ಶತಕ ಪೂರೈಸಿದ ಮಯಾಂಕ್ ಅಗರ್ವಾಲ್ 9 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ ಸಿಡಿಸಿದರು. ಮಯಾಂಕ್ 50 ಎಸೆತಗಳಲ್ಲಿ 10 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 106 ರನ್ ಗಳಿಸಿದ್ರೆ, ರಾಹಲ್ 54 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 69 ರನ್ ಗಳಿಸಿ ಔಟಾದರು.