ಅಬುದಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 48 ಎಸೆತಗಳಲ್ಲಿ ಅಜೇಯ 70 ರನ್ ಗಳಿಸಲು ಹೆಚ್ಚಿನ ಸಾಮರ್ಥ್ಯ ಹಾಕಿದ್ದೇನೆ ಎಂದು ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್ಮ್ಯಾನ್ ಜೋಸ್ ಬಟ್ಲರ್ ಹೇಳಿದ್ದಾರೆ.
"ಈ ಗೆಲುವು ಸಾಧಿಸಿದ್ದಕ್ಕೆ ಸಂತೋಷವಾಗಿದೆ. ನನ್ನ ಬ್ಯಾಟಿಂಗ್‌ನಲ್ಲಿ ಸ್ವಲ್ಪಮಟ್ಟಿನ ತೀವ್ರತೆ ತರಲು ಬಯಸಿದೆ. ಹೊರ ಬರಲು ಪ್ರಯತ್ನಿಸಿದೆ. ಉತ್ತಮ ಪ್ರದರ್ಶನ ನೀಡಬೇಕೆಂದುಕೊಂಡೆ. ಉತ್ತಮವಾದ ಇನ್ನಷ್ಟು ಆಯ್ಕೆಗಳನ್ನು ಬಳಸಿಕೊಂಡು ಗೆಲುವು ಸಾಧಿಸಿದ್ದೇವೆ" ಎಂದರು.
ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ಅಜೇಯ 70 ರನ್ ಸಿಡಿಸಿ ತಂಡದ ಗೆಲುವಿಗೆ ಸಹಕಾರಿಯಾದರು.