ETV Bharat / sports

ಶ್ರೇಯಸ್ ಅಯ್ಯರ್ ಭುಜಕ್ಕೆ ಗಾಯ: ಗೆಲುವಿನ ಸಂಭ್ರಮದಲ್ಲಿದ್ದ ಡೆಲ್ಲಿ ಡಲ್‌ - ಭುಜಕ್ಕೆ ಪೆಟ್ಟು ಮಾಡಿಕೊಂಡ ಆಯ್ಯರ್

ಬೆನ್ ​ಸ್ಟೋಕ್ಸ್​ ಹೊಡೆದ ಚೆಂಡನ್ನು ತಡೆಯಲು ಡೈವ್​ ಮಾಡಿದ ಶ್ರೇಯಸ್​ ಅಯ್ಯರ್ ಭುಜಕ್ಕೆ ಪೆಟ್ಟು ಮಾಡಿಕೊಂಡು ಮೈದಾನದಿಂದ ಹೊರನಡೆದಿದ್ದು, ಡೆಲ್ಲಿ ತಂಡದ ಆತಂಕಕ್ಕೆ ಕಾರಣವಾಗಿದೆ.

Iyer in pain but able to move shoulder
ಶ್ರೇಯಸ್ ಅಯ್ಯರ್ ಭುಗಕ್ಕೆ ಗಾಯ
author img

By

Published : Oct 15, 2020, 12:40 PM IST

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಬುಧವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ಡೆಲ್ಲಿ ತಂಡ ಗೆಲುವು ಸಾಧಿಸಿದ ಸಂತಸ ಒಂದೆಡೆಯಾದ್ರೆ, ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡು ಮೈದಾನದಿಂದ ಹೊರನಡೆದಿದ್ದು ತಂಡದ ಆತಂಕಕ್ಕೆ ಕಾರಣವಾಗಿದೆ.

ಐದನೇ ಓವರ್‌ನಲ್ಲಿ ಬೆನ್​ ಸ್ಟೋಕ್ಸ್​ ಹೊಡೆದ ಚೆಂಡನ್ನು ತಡೆಯಲು ಡೈವ್​ ಮಾಡಿದ ಅಯ್ಯರ್ ಭುಜಕ್ಕೆ ಪೆಟ್ಟು ಮಾಡಿಕೊಂಡರು. ಬಳಿಕ ಅವರು ತೀವ್ರ ನೋವಿನಿಂದಾಗಿ ಮೈದಾನದಿಂದ ಹೊರ ನಡೆಯಬೇಕಾಯ್ತು. ಈ ವೇಳೆ ಮೈದಾನದಲ್ಲಿದ್ದ ಶಿಖರ್ ಧವನ್ ನಾಯಕನ ಜವಾಬ್ದಾರಿ ನಿರ್ವಹಿಸಿದ್ರು.

Iyer in pain but able to move shoulder
ಫೀಲ್ಡಿಂಗ್ ವೇಳೆ ಗಾಯಗೊಂಡ ಶ್ರೇಯಸ್ ಅಯ್ಯರ್

ಪಂದ್ಯದ ಬಳಿಕ ಮಾತನಾಡಿದ ಶಿಖರ್ ಧವನ್, "ಶ್ರೇಯಸ್ ಸ್ವಲ್ಪ ನೋವಿನಲ್ಲಿದ್ದಾರೆ. ವರದಿ ಬಂದ ಬಳಿಕವಷ್ಟೇ ಗಾಯದ ಬಗ್ಗೆ ಸಂಪೂರ್ಣ ಚಿತ್ರಣ ಸಿಗಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ನನ್ನ ಸಂತೋಷ ಹೆಚ್ಚಿಸಿದೆ" ಎಂದರು.

ಶಿಖರ್ ಧವನ್, ಡೆಲ್ಲಿ ತಂಡದ ಆಟಗಾರ

ಈಗಾಗಲೇ ರಿಷಭ್ ಪಂತ್ ಗಾಯಗೊಂಡಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ನಡುವೆ ಶ್ರೇಯಸ್ ಅಯ್ಯರ್ ಗಾಯಗೊಂಡಿರುವುದು ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದ ಅಯ್ಯರ್, 43 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 53 ರನ್​ ಸಿಡಿಸಿ ಮಿಂಚಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.